ಗಾಂಜಾ ಮಾರಾಟ:ಇಬ್ಬರ ಬಂಧನ
ಮೂಡುಬಿದಿರೆ:ತಾಲ್ಲೂಕಿನ ಪ್ರಾಂತ್ಯ ಗ್ರಾಮದ ಕರ್ನಾಟಕ ಸೋ ಮಿಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಲ್ಲಬೆಟ್ಟು ಗ್ರಾಮದ ಗಂಟಾಲ್‍ಕಟ್ಟೆಯ ಮಹ್ಮದ್ ಸಫನ್ ಮತ್ತು ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ಮೊಹ್ಮದ್ ಶಾರೂಕ್ ಎಂದು ತಿಳಿದುಬಂದಿದೆ.
ಆರೋಪಿಗಳು ಮರದ ಮಿಲ್ ಬಳಿ ಬಿಳಿ ಬಣ್ಣದ ಕಾರು ನಿಲ್ಲಿಸಿ ಗಾಂಜಾ ಮಾರಾಟ ಮಾಡುತ್ತಿದ್ದಾರೆನ್ನಲಾಗಿದ್ದು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಪೊಲೀಸ್ ಇನ್‍ಸ್ಪೆಕ್ಟರ್ ನಿರಂಜನ್ ಕುಮಾರ್ ನೇತ್ರತ್ವದಲ್ಲಿ ದಾಳಿ ನಡೆಸಿದಾಗ ಆರೋಪಿಗಳು ಕಾರಿನೊಂದಿಗೆ ಪರಾರಿಯಾದರು. ನಂತರ ಅವರನ್ನು ಬೆನ್ನಟ್ಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಗಾಂಜಾ ಹಾಗೂ ಇತರ ಮಾದಕ ವಸ್ತುಗಳನ್ನು ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
0 Comments