ಭಾರತದ ನಾಳೆಗಳು ಇಂದಿನ ಯುವಜನತೆಯ ಮೇಲೆ ಅವಲಂಬಿತ: ಪ್ರೊ. ಸತ್ಯಂ ಸುವಾಸ್
ಮೂಡುಬಿದಿರೆ: ಸಣ್ಣ ಆವಿಷ್ಕಾರಗಳು ದೊಡ್ಡ ಬದಲಾವಣೆ ತರಲು ಸಾಧ್ಯ. ಹೊಸ ಆವಿಷ್ಕಾರಗಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದರಿಂದ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆಯಾಗಬಲ್ಲದು ಎಂದು ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ನ ಮೆಟೀರಿಯಲ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಸತ್ಯಂ ಸುವಾಸ್ ಹೇಳಿದರು.
ಅವರು ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದ ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ಗಳ ವಿಚಾರ ಸಂಕಿರಣ ಮತ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ತಾಂತ್ರಿಕ ಜ್ಞಾನ ಹೊಂದಿರುವ ಯುವಜನತೆ ದೇಶದ ಬೆಳವಣಿಗೆಗೆ ಉತ್ತಮ ಕೊಡುಗೆ. ವಿದ್ಯಾರ್ಥಿಗಳ ಆಸಕ್ತಿ ಹೊಸ ಆವಿಷ್ಕಾರಗಳನ್ನು ಹುಟ್ಟು ಹಾಕಿದೆ. ಪ್ರತಿಯೊಂದು ಹೊಸ ಆವಿಷ್ಕಾರಗಳನ್ನು ಪ್ರೋತ್ಸಾಹಿಸಿದಾಗ ದೇಶ ಅಭಿವೃದ್ಧಿ ಹೊಂದುತ್ತದೆ. ಭಾರತದ ನಾಳೆಗಳು ಇಂದಿನ ಯುವಜನತೆಯ ಮೇಲೆ ಅವಲಂಬಿತವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಸಿಎಸ್‌ಟಿ ಕಾರ್ಯದರ್ಶಿ ಪ್ರೊ. ಅಶೋಕ್ ಎಂ. ರಾಯಚೂರು ಮಾತನಾಡಿ ವಿದ್ಯಾರ್ಥಿಗಳ ಯೋಜನೆಗಳು ಸ್ಥಳೀಯ ಸಮಸ್ಯೆಗಳನ್ನು ಸರಿದೂಗಿಸಲು ಸಹಕಾರಿಯಾಗಿರುವುದು ವಿಶೇಷ. ಹೀಗಾಗಿ ದೇಶದ ಅಭಿವೃದ್ಧಿಗೆ ಇವು ಪೂರಕವಾಗಲಿವೆ ಎಂದರು.
ಕೆಎಸ್‌ಸಿಎಸ್‌ಟಿ ಕಾರ್ಯದರ್ಶಿ ಪ್ರೊ. ಅಶೋಕ್ ಎಂ. ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಯು ಟಿ ವಿಜಯ್ ಅವರನ್ನು ಆಳ್ವಾಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿ ಪ್ರಾಜೆಕ್ಟ್ಗಳಲ್ಲಿ ೨೮ ಉತ್ತಮ ಪ್ರದರ್ಶನಗೊಂಡ ಯೋಜನೆಗಳಿಗೆ ಹಾಗೂ ೨೯ ಉತ್ತಮ ಸೆಮಿನಾರ್‌ಗಳಿಗೆ ಪ್ರಶಸ್ತಿ, ಪ್ರಮಾಣಪತ್ರ ಹಾಗೂ ನಗದು ಪುರಸ್ಕಾರ ನೀಡಲಾಯಿತು. ಬೆಂಗಳೂರಿನ ಆರ್‌ವಿ ಇಂಜಿನಿಯರಿAಗ್ ಕಾಲೇಜು ಅತ್ಯುತ್ತಮ ಸಾಧನೆಗಾಗಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
ಕೆಎಸ್‌ಸಿಎಸ್‌ಟಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಯು ಟಿ ವಿಜಯ್ ಸ್ವಾಗತಿಸಿದರು. ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ವಂದಿಸಿದರು. ಕೆಎಸ್‌ಸಿಎಸ್‌ಟಿ ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಕೆ. ಎನ್ ವೆಂಕಟೇಶ್ ಪ್ರಶಸ್ತಿ ವಿಜೇತರನ್ನು ಘೋಷಿಸಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.
.
0 Comments