☝️ಬಾವಿಗೆ ಹಾರಿ ಆತ್ಮಹತ್ಯೆ
ಮೂಡುಬಿದಿರೆ: ಬೆಳುವಾಯಿ ಬರಕಲ ಬರ್ಕೆ ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ಎಂಬವರು ಇಂದು ಮುಂಜಾನೆ ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ದುಡಿಯುತ್ತಿದ್ದರು.
ಇವರಿಗೆ ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 Comments