ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*

ಜಾಹೀರಾತು/Advertisment
ಜಾಹೀರಾತು/Advertisment

 *ಮೂಡುಬಿದಿರೆ : ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*



ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕು ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.



ಜನಜಾಗ್ರತಿ ವೇದಿಕೆಯ ಮೂಡುಬಿದಿರೆ ವಲಯ ಅಧ್ಯಕ್ಷರಾದ ಜೊಸ್ಸಿ ಮಿನೇಜಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ತಾನು ಮಾತ್ರ ನರಕಯಾತನೆ ಅನುಭವಿಸಿದರೆ ದುಶ್ಚಟ ಇರುವ ವ್ಯಕ್ತಿಯ ಮನೆಯಲ್ಲಿ ಎಲ್ಲರೂ ನರಕಯಾತನೆ ಅನುಭವಿಸಬೇಕಾಗುತ್ತದೆ. ಇಂತಹ ದುಶ್ಚಟದ ದಾಸರಾಗದೇ ಜೀವನದಲ್ಲಿ ಉನ್ನತ ಸಾಧನೆ ಮಾಡಿ ಈ ಸಮಾಜಕ್ಕೆ ಕೀರ್ತಿ ತರುವಂತಹ ವ್ಯಕ್ತಿಗಳು ನೀವಾಗಬೇಕು ಇದೆಲ್ಲವೂ ಮದ್ಯವ್ಯಸನಿಯ ಮನಪರಿವರ್ತನೆಯಿಂದ ಮಾತ್ರ ಸಾಧ್ಯ ಎಂದರು. ತಾಲೂಕು ಯೋಜನಾಧಿಕಾರಿ ಶ್ರೀಮತಿ ಸುನಿತಾ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಪ್ರಗತಿ ಬಂಧು ಒಕ್ಕೂಟದ ವಲಯ ಅಧ್ಯಕ್ಷರಾದ ಶ್ರೀಯುತ ಅರುಣ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖೋಪಧ್ಯಾಯ ಶ್ರೀಯುತ ಮುನಿರಾಜ್ ರೆಂಜಾಳ  ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದುಷ್ಟಟಗಳಿಂದ ದೂರವಿರುವ ಸಂಕಲ್ಪ ಮಾಡಿದರೆ ಬದುಕು ಸ್ವಾಸ್ಥ್ಯದಿಂದ ಕೂಡಿರುತ್ತದೆ. ಇಂದಿನ ಯುವಜನತೆ ಒಳ್ಳೆಯ ಹವ್ಯಾಸಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕನಾಗಿ ಹೊರಹೊಮ್ಮಬೇಕು. ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟ ದುರಭ್ಯಾಸದ ದಾಸರಾಗದೆ ತಂದೆ ತಾಯಿಯವರು ಕಂಡಿರುವ ಕನಸನ್ನು ನನಸು ಮಾಡಲು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮೂಡುಬಿದಿರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಮಮತಾ, ಮೂಡುಬಿದಿರೆ ವಲಯ ಪ್ರಾಂತ್ಯ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಶ್ರೀಮತಿ ಅನುಪಮಾ, ಮೂಡುಬಿದಿರೆ ವಲಯ ಜ್ಯೋತಿನಗರ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಶ್ರೀಮತಿ ಅನಿತಾ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರಮಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು.  ಗಣಕಯಂತ್ರ ವಿಜ್ಞಾನ ಉಪನ್ಯಾಸಕಿ ನವಿತಾ ವಂದನಾರ್ಪಣೆ  ಸಲ್ಲಿಸಿದರು.



Post a Comment

0 Comments