ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಬಿಜೆಪಿ ನಾಯಕರನ್ನು ಆಹ್ವಾನಿಸಿದ ಮಸೀದಿ ಮುಖ್ಯಸ್ಥರು:ಭಾವೈಕ್ಯತೆ ಸಂದೇಶ ಸಾರಿದ ನಾಯಕರು
ಉಡುಪಿ ಜಿಲ್ಲೆಯ ಕೋಟದಲ್ಲಿರುವ ಜಾಮೀಯಾ ಮಸೀದಿಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಸೀದಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಭಾರತದಲ್ಲಿ ನಾವು ಸಹೋದರರಂತೆ ಬದುಕಬೇಕು. ಒಟ್ಟಾಗಿ ಸೇರಿ ಭಾರತವನ್ನು ಪ್ರೀತಿಸೋಣ ಎಂದು ಕರೆಕೊಟ್ಟರು.
0 Comments