ನಾಳೆ ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ, ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ, ಸಚಿವರುಗಳು ಭಾಗಿ
ಮೂಡುಬಿದಿರೆ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, (೨) ಬೆಂಗಳೂರು,
ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಹಾಗೂ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ
ರಾಷ್ಟ್ರೀಯ ಕ್ರೀಡಾ ದಿನಾಚರಣೆ, ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ, ದೈಹಿಕ ಶಿಕ್ಷಣ ಭೀಷ್ಮ ಮತ್ತು ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ ಕನ್ನಡ ಭವನದಲ್ಲಿ ನಡೆಯಲಿದೆ.
ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಭಾಗವಹಿಸಲಿದ್ದು , ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ಚೌಡಯ್ಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
0 Comments