ಮೂರುಕಾವೇರಿಯಲ್ಲಿ ಕಾರಿಗೆ ಢಿಕ್ಕಿ ಹೊಡೆದ ಟಿಪ್ಪರ್ ಮಾರ್ನಾಡಿನ ವ್ಯಕ್ಯಿ ಮೃತ್ಯು

ಜಾಹೀರಾತು/Advertisment
ಜಾಹೀರಾತು/Advertisment

 ಮೂರುಕಾವೇರಿಯಲ್ಲಿ ಕಾರಿಗೆ ಢಿಕ್ಕಿ ಹೊಡೆದ ಟಿಪ್ಪರ್ 

ಮಾರ್ನಾಡಿನ ವ್ಯಕ್ತಿ ಮೃತ್ಯು



ಮೂಡುಬಿದಿರೆ: ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಕಾರಿಗೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಮೂಡುಬಿದಿರೆ ತಾಲೂಕಿನ ಮಾರ್ನಾಡು ನಿವಾಸಿ ರಾಮಣ್ಣ ಎಂಬವರು ತೀವೃ ಗಾಯಗೊಂಡು ಮೃತಪಟ್ಟಿದ್ದು ಉಳಿದಂತೆ 

 ಐವರು ಪ್ರಯಾಣಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.



   ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಮಾರ್ನಾಡಿನ ಚಾಲಕ ಸೇರಿ ಆರು ಮಂದಿ ಕೂಲಿ ಕೆಲಸಕ್ಕಾಗಿ ಮೂಲ್ಕಿ ಕಾರ್ನಾಡುವಿಗೆ ತೆರಳಿದ್ದರು. ಸಂಜೆ ವೇಳೆಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ಸಂದರ್ಭ ಮೂಡುಬಿದಿರೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರು ಕಾವೇರಿ ಸಮೀಪದ ಮಹಮ್ಮಾಯಿ ದೇವಸ್ಥಾನದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರ ಸ್ಥಿತಿ ಗಂಭೀರ ಎನ್ನಲಾಗಿದೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post a Comment

0 Comments