ಬಿಜೆಪಿ ನಾಯಕರ ಸಾಂಘಿಕ ಧರಣಿಗೆ ಮಣಿದ ಸರ್ಕಾರ:ಮೂಡುಬಿದಿರೆ ಶಾಸಕರಿಗೆ ದಿಗ್ವಿಜಯ

ಜಾಹೀರಾತು/Advertisment
ಜಾಹೀರಾತು/Advertisment

 ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇರುವೈಲು ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನಾ ವಿಚಾರವಾಗಿ ನಡೆದ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಬಿದ್ದಿದೆ. 



ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಂಚಾಯತ್ ರಾಜ್ ಸಚಿವರ‌ ಹೆಸರು ಇಲ್ಲವಾಗಿದ್ದು ಈ ಸಂಬಂಧ ಇಬ್ಬರು ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿತ್ತು.


ಸರ್ಕಾರದ ಈ ಕ್ರಮಕ್ಕೆ ಮೂಡುಬಿದಿರೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಧರಣಿ ಕುಳಿತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲು ಪ್ರಶ್ನೆಗಳ ಸುರಿಮಳೆಗೈದಿದ್ದರು.


ಈ ಪರಿಣಾಮ ಸಂಜೆಯ ಒಳಗಾಗಿ ಆದೇಶ ಹಿಂಪಡೆಯುವ ಭರವಸೆ ನೀಡಿದ್ದ ಜಿಲ್ಲಾಧಿಕಾರಿಗಳು ಅಮಾನತಾಗಿದ್ದ ತಾಲೂಕು ಪಂಚಾಯತ್ ಇಒ ಹಾಗೂ ಪಿಡಿಓ ರನ್ನು ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಆದೇಶಿಸಿದ್ದಾರೆ.

Post a Comment

0 Comments