*ಡಾ.ರಾಮಕೃಷ್ಣ ಶಿರೂರು ಅವರು ಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿಗೆ ಆಯ್ಕೆ*
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಡಾ. ರಾಮಕೃಷ್ಣ ಶಿರೂರು ಇವರು ಕರುನಾಡ ಹಣತೆ ಕವಿ ಬಳಗ ಇವರು ನೀಡುವ ಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿ- 2023ರ ರಾಜ್ಯಮಟ್ಟದ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ.
2023 ಸೆಪ್ಟೆಂಬರ್ 24 ರಂದು ಶಿರಸಿಯ ನೆಮ್ಮದಿ ಕುಟೀರ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿ ಕಲಾತಂಡ (ರಿ) ರಾಜ್ಯ ಅಧ್ಯಕ್ಷ ಶ್ರೀ ಎಸ್. ರಾಜು ಸೂಳೇನಹಳ್ಳಿ ಅವರು ತಿಳಿಸಿರುತ್ತಾರೆ
ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ ಕ್ಷೇತ್ರ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಎಂ. ಎ. ಬಿ. ಎಡ್. ಪದವೀಧರರಾದ ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವಿ ಸಲ್ಲಿಸಿ,
19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.
ಸಾಹಿತ್ಯ ಸಂಗೀತ ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ಇವರ ಸೇವೆ ಅಮೋಘ ವಾದುದು.
ಸಾಹಿತ್ಯ ಸೌರಭ
2002 ರಲ್ಲಿ ಸಾಹಿತ್ಯ ಸೌರಭ ಮೂಡುಬಿದಿರೆ ಎಂಬ ಸಾಹಿತ್ಯ ಸಂಘಟನೆಯನ್ನು ಸ್ಥಾಪಿಸಿದರು. ಮೂಡುಬಿದಿರೆ ತಾಲೂಕಿನ ಎಲ್ಲಾ ಪ್ರೌಢಶಾಲೆ ಮತ್ತು ಕ ಪದವಿ ಪೂರ್ವ ಕಾಲೇಜುಗಳಲ್ಲಿ ಸಾಹಿತ್ಯ ಸಂಗೀತ ಸಂಸ್ಕೃತಿಗೆ ಸಂಬಂಧಪಟ್ಟಂತೆ ಪ್ರತಿ ತಿಂಗಳು ಸಾಹಿತ್ಯ ಚಿಂತನ ಮತ್ತು ಸಂಸ್ಕೃತಿ ಚಿಂತನ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಇದರ ಅಂಗ ಸಂಸ್ಥೆಗಳಾದ ಯಕ್ಷ ಸೌರಭ, ಕೀರ್ತನ ಸೌರಭ, ನೃತ್ಯ ಸೌರಭ, ರಂಗ ಸೌರಭ, ಸಂಗೀತ ಸೌರಭದ ಮೂಲಕ ಹದಿಹರೆಯದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ವಾತಾವರಣವನ್ನು ನಿರ್ಮಾಣ ಮಾಡಿದರು.
ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನ
2010 ರಲ್ಲಿ ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನ ಮೂಡುಬಿದಿರೆ ಎಂಬ ಸಂಸ್ಥೆಯ ಮೂಲಕ ಭರತನಾಟ್ಯ ಮತ್ತು ಜನಪದ ನೃತ್ಯ ತರಬೇತಿ, ಯಕ್ಷಗಾನ ತರಬೇತಿ, ರಂಗತರಭೀತಿಯನ್ನು ನಿರಂತರವಾಗಿ ನಡೆಸಿಕೊಂಡು ಬಂದು, ನೃತ್ಯ ಸೌರಭ, ರಂಗ ಸೌರಭ ಕಾರ್ಯಕ್ರಮಗಳನ್ನು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಪ್ರದರ್ಶನ ನೀಡಿದರು.
ಸಂಗೀತ ಮತ್ತು ಭಜನೆ
ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ರಾಮಕೃಷ್ಣ ಶಿರೂರು ಭಜನಾ ಕಲಾವಿದರಾಗಿ ಹಾರ್ಮೋನಿಯಂ ವಾದಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.
ಪ್ರೌಢಶಾಲಾ ಸಹ ಶಿಕ್ಷಕರ ಸಂಘ
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಿರುವ ಸಂದರ್ಭದಲ್ಲಿ 2000ನೇ ಇಸವಿಯಲ್ಲಿ ಕುಂದಾಪುರದ ರಂಗಪ್ಪಯ್ಯ ಹೊಳ್ಳ ಅವರ ನೇತೃತ್ವದಲ್ಲಿ ಸಹಶಿಕ್ಷಕ ಸಂಘಟನೆಯನ್ನು ಪುನಶ್ಚೇತನ ಗೊಳಿಸಿದರು. ಸಹ ಶಿಕ್ಷಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ಮೂಡುಬಿದಿರೆ ತಾಲೂಕಿನ ಕಾರ್ಯದರ್ಶಿಯಾಗಿ ಸಂಘಟನೆಯನ್ನು ಬಲವರ್ಧನೆಗೊಳಿಸಿದರು.
2008ರಲ್ಲಿ ಉಡುಪಿ ಜಿಲ್ಲೆಯ ಬೈಲೂರು ಭಾಸ್ಕರ್ ಶೆಟ್ಟಿ ಮತ್ತು ಉಡುಪಿಯ ಚಂದ್ರಶೇಖರ ಅಡಿಗ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು 20 08 ರಿಂದ 2014ರ ಅವಧಿಯಲ್ಲಿ ಜಿಲ್ಲೆಯಲ್ಲಿ ಸಹ ಶಿಕ್ಷಕರ ಸಂಘ ಎಲ್ಲಾ ಶಿಕ್ಷಕರ ನೋವು ನಲಿವುಗಳಿಗೆ ಸ್ಪಂದಿಸುವ ಸ್ಥಿತಿ ನಿರ್ಮಾಣವಾಯಿತು. ಈ ಅವಧಿಯಲ್ಲಿ ಶಿಕ್ಷಕ ಬಂಧುಗಳು ಸಂಘದ ಬಗ್ಗೆ ಭರವಸೆಯ ಬೆಳಕನ್ನು ಬೆಳೆಸಿಕೊಂಡರು. ಯಾವುದೇ ರೀತಿಯ ಸಮಸ್ಯೆಗಳ ಬಗ್ಗೆ ಜಿಲ್ಲಾ ಶಿಕ್ಷಕರ ಸಂಘದಿಂದ ಪರಿಹಾರ ಲಭಿಸುತ್ತದೆ ಎಂಬ ವಿಶ್ವಾಸ ಬೆಳೆಸಿಕೊಂಡರು.
ಈ ಅವಧಿಯಲ್ಲಿಯೇ ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪರವಾಗಿ ಜಿಲ್ಲಾಧ್ಯಕ್ಷರನ್ನು ಆಹ್ವಾನಿಸುವ ಪರಂಪರೆ ಆರಂಭವಾಯಿತು. ಜಿಲ್ಲಾ ಹಂತದ ಪ್ರತಿಭಾ ಕಾರಂಜಿ, ಕ್ರೀಡಾಕೂಟ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮಗಳಲ್ಲಿ ಸಹ ಶಿಕ್ಷಕರ ಸಂಘದ ಅಧ್ಯಕ್ಷರನ್ನು ಅತಿಥಿಗಳಾಗಿ ವೇದಿಕೆಗೆ ಕರೆಯುವ ಪದ್ಧತಿಗಳು ಇವತ್ತಿಗೂ ಈ ಪರಂಪರೆ ಮುಂದುವರಿದುಕೊಂಡು ಬಂದಿದೆ.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಸಮಿತಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆಗೆ ಸಹ ಶಿಕ್ಷಕ ಸಂಘದ ಅಧ್ಯಕ್ಷರನ್ನು ಕರೆಯುವ ಪರಂಪರೆ ಆರಂಭವಾಗಿ ನಿರಂತರವಾಗಿ ಮುಂದುವರಿದುಕೊಂಡು ಬಂದಿದೆ. ಈ ಅವಧಿಯಲ್ಲಿಯೇ ಸಹ ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಬಹಿಷ್ಕಾರ ಜಿಲ್ಲಾ ಹಂತದಲ್ಲಿ ಬೃಹತ್ ಪ್ರಮಾಣದಲ್ಲಿ ನಡೆದಿರುವುದು ಈಗ ಇತಿಹಾಸವಾಗಿದೆ. ಪ್ರೌಢಶಾಲಾ ಶಿಕ್ಷಕರ ವೇತನ ವಿಳಂಬಕ್ಕಾಗಿ ಡಿಸಿ ಕಚೇರಿಯ ಎದುರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ವೇತನ ಬಿಡುಗಡೆಗೊಳಿಸಿಕೊಳ್ಳುವಲ್ಲಿ ಸಂಘ ಯಶಸ್ವಿಯಾಯಿತು.
20 14ರಲ್ಲಿ ರಾಮಕೃಷ್ಣ ಶಿರೂರು ಅವರ ಕ್ರಿಯಾಶೀಲತೆಯನ್ನು ಗಮನಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಇವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತು. ಈ ಅವಧಿಯಲ್ಲಿ ರಾಜ್ಯಮಟ್ಟದ ಸಹ ಶಿಕ್ಷಕರ ಸಂಘದ ಸಂಘಟನೆಯಲ್ಲಿ ತೊಡಗಿಸಿಕೊಂಡ ಇವರು ಸಂಘದ ಕ್ರಿಯಾಶೀಲ ಪದಾಧಿಕಾರಿಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
2022 ರಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಮೂಡುಬಿದಿರೆ ತಾಲೂಕಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಶಿಕ್ಷಣ ಸಾಹಿತ್ಯ ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ಇವರ ವಿಶಿಷ್ಟವಾದ ಕ್ರಿಯಾಶೀಲತೆಯನ್ನು ಗುರುತಿಸಿ 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಸೇವೆಯನ್ನು ಗುರುತಿಸಿ
2003 ರಲ್ಲಿ ಸಿರಿಗನ್ನಡ ಜಿಲ್ಲಾ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
2004ರಲ್ಲಿ ಸಾಂಗತ್ಯ ರಾಜ್ಯೋತ್ಸವ ಪ್ರಶಸ್ತಿ ಇವರಿಗೆ ಲಭಿಸಿದೆ.
2005ರಲ್ಲಿ ಕನ್ನಡ ರತ್ನ ಪ್ರಶಸ್ತಿಯ ಗೌರವ ಇವರಿಗೆ ಲಭಿಸಿದೆ.
2007ರಲ್ಲಿ ಅಖಿಲ ಕರ್ನಾಟಕ ಕನ್ನಡ ಜಾಗೃತ ಬಳಗ ದಕ್ಷಿಣ ಕನ್ನಡ ಜಿಲ್ಲೆ ಇದರ ದಶಮಾನೋತ್ಸವ ಪ್ರಶಸ್ತಿ ಇವರ ಮುಡಿಗೇರಿದೆ.
2018ರಲ್ಲಿ ರೋಟರಿ ಮಿಡ್ ಟೌನ್ ಮೂಡುಬಿದಿರೆ ಇವರಿಗೆ ರಾಷ್ಟ್ರ ನಿರ್ಮಾಪಕ ಪ್ರಶಸ್ತಿ ನೀಡಿ ಗೌರವಿಸಿದೆ .
2019ರಲ್ಲಿ ಇವರ ಸಾಧನೆಯನ್ನು ಪರಿಗಣಿಸಿ ನೇಪಾಳದ ಏಷ್ಯನ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
2019ರಲ್ಲಿ ಮೂಡುಬಿದಿರೆ ಕೋ ಆಪರೇಟಿವ್ ಬ್ಯಾಂಕ್ ಇವರ ಸಾಧನೆಯನ್ನು ಪರಿಗಣಿಸಿ ಗೌರವಿಸಿದೆ.
2021ರಲ್ಲಿ ಕರ್ನಾಟಕ ರಾಜ್ಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ತಾಲೂಕು ಘಟಕ ಇವರಿಗೆ ರಾಜ್ಯೋತ್ಸವ ಪುರಸ್ಕಾರ- 2021 ನೀಡಿ ಗೌರವಿಸಿದೆ.
2022 ನೇ ಸಾಲಿನಲ್ಲಿ ಮೂಡುಬಿದಿರೆಯ ಟೆಂಪಲ್ ಟೌನ್ ರೋಟರಿ ಕ್ಲಬ್ ಇವರಿಗೆ ರಾಷ್ಟ್ರ ನಿರ್ಮಾಪಕ ನೇಷನ್ ಬಿಲ್ಡರ್ 2022 ಪ್ರಶಸ್ತಿ ನೀಡಿ ಗೌರವಿಸಿದೆ.
ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಇವರಿಗೆ ಶಿಕ್ಷಣ ಶಿಲ್ಪಿ- 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಸಾಧನ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ರಿ ಮಂಗಳೂರು ಇವರ ಕಾವ್ಯ ಸಮಾರಂಭದಲ್ಲಿ ಕವಿ ಕಾವ್ಯ ಸನ್ಮಾನ- 2023 ಪುರಸ್ಕಾರವನ್ನು ಪಡೆದಿರುತ್ತಾರೆ. ಸಮಾಜಮುಖಿ ಸೇವಾ ಸಂಸ್ಥೆ ಮತ್ತು ಶ್ರೀನಿಧಿ ಫೌಂಡೇಶನ್ ಧಾರವಾಡ ಇವರು ನೀಡುವ ರಾಷ್ಟ್ರೀಯ ಶಿಕ್ಷಣ ರತ್ನ ಪ್ರಶಸ್ತಿ-2023 ಇವರಿಗೆ ಲಭಿಸಿರುತ್ತದೆ.
ಸಾಹಿತ್ಯ ಸೇವೆ
ಕವನಗಳ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇದರ ರಾಜ್ಯ ಸಂಚಾಲಕರಾಗಿ,
ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಖಿಲ ಭಾರತ ಸಾಹಿತ್ಯಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಡುಬಿದಿರೆ ತಾಲೂಕು ಶಿಕ್ಷಕ ದಿನಾಚರಣಾ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಪೊನ್ನೆಚಾರಿ ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿಯ ಸಾಂಸ್ಕೃತಿಕ ಸ್ಪರ್ಧಾ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಆಳ್ವಾಸ್ ನುಡಿಸಿರಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಆಳ್ವಾಸ್ ವಿದ್ಯಾರ್ಥಿ ಸಿರಿ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹವ್ಯಕ ಸಭಾ ಮೂಡುಬಿದಿರೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಇನ್ನೂ ಸೇವೆಸಲ್ಲಿಸಿರುತ್ತಾರೆ.ಪ್ರಸ್ತುತ ಹವ್ಯಕ ಸಭಾ ಮೂಡುಬಿದಿರೆ ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
0 Comments