ಮಂಗಳೂರು ವಿಶ್ವವಿದ್ಯಾನಿಲಯದ ಇಬ್ಬಗೆ ನೀತಿಯ ಹಿಂದೆ ಖಾದರ್ ಕುಮ್ಮಕ್ಕಿದೆ:ಬಿಜೆಪಿ ಜಿಲ್ಲಾಧ್ಯಕ್ಷ ಗಂಭೀರ ಆರೋಪ
ಪ್ರತಿವರ್ಷ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಈ ಬಾರಿ ಬ್ರೇಕ್ ಹಾಕಲು ನಿರ್ಧರಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಗಳ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರಂಭದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡದೆ ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಿರುವುದಕ್ಕೆ ನಮ್ಮ ಆಕ್ಷೇಪವಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಆ ಭಾಗದ ಜನರೂ ಸೇರುವುದು ವಿಶೇಷ. ಹೀಗಾಗಿ ಸಾರ್ವಜನಿಕ ಪ್ರವೇಶ ನಿರಾಕರಿಸಿರುವುದರ ಹಿಂದೆ ಶಾಸಕ ಯುಟಿ ಖಾದರ್ ಕುಮ್ಮಕ್ಕಿದೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
0 Comments