ನೀರ್ಕೆರೆ ಶಾಲೆಯಲ್ಲಿ ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಚಾಲನೆ
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಇದರ ವತಿಯಿಂದ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆ ಇಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಾಲಾ ವಿದ್ಯಾರ್ಥಿ ನಾಯಕ ದೀಪಕ್ ಮತ್ತು ವಿದ್ಯಾರ್ಥಿ ನಾಯಕಿ ಸೃಷ್ಠಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ತೆಂಕಮಿಜಾರು ಗ್ರಾ.ಪಂ.ಅಧ್ಯಕ್ಷೆ ಶಾಲಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ., ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಮೆಲ್ವೀನ್, ಕ್ಷೇತ್ರ ಸಂಪನ್ಮೂಲ ಸಂಯೋಜಕಿ ಸೌಮ್ಯ, ಊರಿನ ಹಿರಿಯರಾದ ಶ್ರೀನಿವಾಸ ಗೌಡ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿಗಾರ್, ಮಹೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಶಾಂತ್ ಜೋಗಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಡಾ.ಪ್ರತಿಮಾ ಹೆಚ್., ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಹಾಗೂ ಶಿಕ್ಷಕ ವೃಂದದವರು, ಎಸ್ ಡಿಎಂಸಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments