ರೋಟರಿ ಶಾಲೆಯಲ್ಲಿ ಮಾದಕ ದ್ರವ್ಯ ವ್ಯಸನಗಳು ಮತ್ತು ಸೈಬರ್ ಸುರಕ್ಷತೆಯ ಬಗ್ಗೆ ಮಾಹಿತಿ
ಮೂಡುಬಿದಿರೆ: ಇಲ್ಲಿನ ರೋಟರಿ ಕೇಂದ್ರೀಯ ಶಾಲೆ ಮತ್ತು ರೋಟರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ “ಮಾದಕ ದ್ರವ್ಯ ವ್ಯಸನಗಳು ಮತ್ತು ಸೈಬರ್ ಸುರಕ್ಷತೆಯ” ಬಗ್ಗೆ ಮಾಹಿತಿ ಕಾರ್ಯಕ್ರಮವು ಬುಧವಾರ ರೋಟರಿ ಶಿಕ್ಷಣ ಸಂಸ್ಥೆಗಳ ರೋ|.ಅಮರನಾಥ ಶೆಟ್ಟಿ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು.
ಮೂಡಬಿದಿರೆ ಪೊಲೀಸ್ ಸಬ್ ಇನ್ಸೆಪೆಕ್ಟರ್ ಸಿದ್ದಪ್ಪ ನರನೂರು“ಮಾದಕ ದ್ರವ್ಯ ವ್ಯಸನಗಳು ಮತ್ತು ಸೈಬರ್ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿ ಗುರುತು ಪರಿಚಯ ಇಲ್ಲದ ವ್ಯಕ್ತಿಮೂಲಗಳಿಂದ ಕರೆಯನ್ನು ಸ್ವೀಕರಿಸುವುದಾಗಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಲಿಂಕ್‌ಗಳಿಗೆ ಪ್ರತಿಕ್ರಿಯೆ ನೀಡುವುದನ್ನು ಮಾಡಬಾರದು ಮತ್ತು ಆಸೆಯ ಬಲೆಗೆ ಬಿದ್ದು ಹಣವನ್ನು ಕಳೆದುಕೊಳ್ಳಬಾರದು ಹಾಗೂ ಯಾವುದೇ ತುರ್ತು ಸಂದರ್ಭದಲ್ಲಿಯೂ ಪೋಲಿಸ್ ಇಲಾಖೆಯನ್ನು ಸಂಪರ್ಕಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮನಶಾಸ್ತ್ರಜ್ಞೆ ಡಾ|| ರುಕ್ಸನಾ ಹಸನ್ ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಅವುಗಳ ವಿರುದ್ದ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿ ಇತ್ತೀಚಿನ ದಿನಗಳಲ್ಲಿ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವುದು ಮತ್ತು ಪ್ರೀತಿ ಪ್ರೇಮಗಳ ಬಲೆಯಲ್ಲಿ ಬಿದ್ದು ತಮ್ಮ ಜೀವನವನ್ನು ಹಾಳು ಮಾಡುವುದರ ಬಗ್ಗೆ ಮತ್ತು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಜ್ಞಾನದ ಮಹತ್ವವನ್ನು ಒತ್ತಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಪದವಿ ಪೂರ್ವ ಕಾಲೇಜು ಹಾಗೂ ರೋಟರಿ ಕೇಂದ್ರಿಯ ಶಾಲೆಯ ಸಂಚಾಲಕರಾದ ರೋ, ಜೆ. ಡಬ್ಲ್ಯೂ.ಪಿಂಟೊ ಇವರು ವಹಿಸಿ ಶುಭ ಹಾರೈಸಿದರು.
ರೋಟರಿ ಕೇಂದ್ರಿಯ ಶಾಲೆಯ ಪ್ರಾಂಶುಪಾಲೆ ರೂಪ ಮಸ್ಕರೇನ್ಹ್‌ಸ್ ಸ್ವಾಗತಿಸಿದರು. ರೋಟರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿ ಕುಮಾರ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಡಾ|| ರುಕ್ಸನಾ ಹಸನ್ ಇವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾದ ಪ್ರಫುಲ್ ಡಿಸೋಜಾ ಮತ್ತು ರೋಟರಿ ಕೇಂದ್ರಿಯ ಶಾಲೆ ಮತ್ತು ರೋಟರಿ ಪದವಿಪೂರ್ವ ಕಾಲೇಜಿನ ಎಲ್ಲಾ ಭೋಧಕ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರವೀಣ್ ಡಿಸೋಜಾ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
0 Comments