ಕರಾಟೆ ಎಕ್ಸಲೆಂಟ್ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು ದಕ್ಷಿಣ ವಲಯದ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ದೇರಳಕಟ್ಟೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿ ಸುಮಿತ್ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಹಾಗೂ ಭೋಧಕ ವರ್ಗದವರು ವಿಜೇತನನ್ನು ಅಭಿನಂದಿಸಿದರು.
0 Comments