ನೀರ್ಕೆರೆಯಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟಕ್ಕೆ ಚಾಲನೆ

ಜಾಹೀರಾತು/Advertisment
ಜಾಹೀರಾತು/Advertisment

 ನೀರ್ಕೆರೆಯಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟಕ್ಕೆ ಚಾಲನೆ



ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆ ಇವುಗಳ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ-2023ವು ಶನಿವಾರ ನೀರ್ಕೆರೆಯಲ್ಲಿ ನಡೆಯಿತು.




 ತೆಂಕಮಿಜಾರು ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ದೀಪ ಬೆಳಗಿಸುವ ಮೂಲಕ ಪಂದ್ಯಾಟವನ್ನು



 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನದಿಂದ ನಿರ್ಮಿಸಿರುವ ಪ್ರಸಾದನ ಕೊಠಡಿಯನ್ನು ದಾನಿ, ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆಯ ಅಧ್ಯಕ್ಷ ರೋಶನ್ ಡಿ'ಕೋಸ್ತ ಅವರು ಉದ್ಘಾಟಿಸಿದರು.

ನೂತನವಾಗಿ ಆರಂಭಗೊಂಡಿರುವ ಎಲ್ .ಕೆ.ಜಿ.ತರಗತಿಗೆ ಅತಿಥಿಗಳು ಚಾಲನೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ,  ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿಗಾರ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಎಸ್.,ಊರಿನ ಹಿರಿಯರಾದ ಅಜಿತ್ ಕುಮಾರ್ ಜೈನ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪುತ್ರನ್, ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹೇಶ್, ನೀರ್ಕೆರೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ  ನೀರ್ಕೆರೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಾ.ಪ್ರತಿಮಾ ಹೆಚ್ .ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾ.ಪಂ.ಸದಸ್ಯರು, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments