ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ:ಮೂಡುಬಿದಿರೆಯ ಮೂವರು ಶಿಕ್ಷಕಿಯರಿಗೆ ಪ್ರಶಸ್ತಿಯ ಗರಿ
ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ಕೊಡಲ್ಪಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆಯ ಮೂವರು ಶಿಕ್ಷಕಿಯರು ಆಯ್ಕೆಯಾಗಿದ್ದಾರೆ.
ಸರ್ಕಾರಿ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ವಾಲ್ಪಾಡಿಯ ಮಾಡದಂಗಡಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿಶ್ರೀ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಣಪಿಲ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸುಜಾತ ಕೆ. ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ನೀರ್ಕೆರೆ ಪ್ರೌಢಶಾಲಾ ಶಿಕ್ಷಕಿ ಡಾ.ಪ್ರತಿಮಾ ರವರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು ಸೆಪ್ಟೆಂಬರ್ 5ರಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಅಂಗವಾಗಿ ನಡೆಯಲಿರುವ ಶಿಕ್ಷಕರ ದಿನಾಚರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈ ಕಾರ್ಯಕ್ರಮ ಈ ಬಾರಿ ಸುಳ್ಯದಲ್ಲಿ ನಡೆಯಲಿದೆ.
0 Comments