ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕಿ ವಾಣಿಶ್ರೀ ಅವರಿಗೆ ಅಭಿನಂದನೆ
ಮೂಡುಬಿದಿರೆ: 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಾಲ್ಪಾಡಿ ಮಾಡದಂಗಡಿ ಶಾಲಾ ಶಿಕ್ಷಕಿ ವಾಣಿಶ್ರೀ ಅವರನ್ನು ಎಸ್.ಡಿ.ಎಮ್.ಸಿ, ಹಳೆ ವಿದ್ಯಾರ್ಥಿ ಸಂಘ,ಗ್ರಾಮೋತ್ಸವ ಸಮಿತಿ ಹಾಗೂ ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಅಭಿನಂದಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಅವರು ವಾಣಿಶ್ರೀ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ,ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಉದ್ಯಮಿಗಳಾದ ವಿಘ್ನೇಶ್ ಆಚಾರ್ಯ, ಸಂತೋಷ್ ಅಮಣಿ ಅತಿಥಿಗಳಾಗಿ ಭಾಗವಹಿಸಿದ್ದರು.
ಎಸ್.ಡಿ.ಎಮ್.ಸಿ ಮಾಜಿ ಅಧ್ಯಕ್ಷರಾದ ಸುಧಾಕರ ಸುವರ್ಣ, ಪ್ರಭಾವತಿ,ಇಬ್ರಾಹಿಂ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ,ಮಹಿಳಾ ಮಂಡಲ ಅಧ್ಯಕ್ಷೆ ಜೆಸಿಂತಾ ಫರ್ನಾಂಡೀಸ್, ಅಂಗನವಾಡಿ ಶಿಕ್ಷಕಿ ಸುನೀತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸುಮಂತ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ರಶ್ಮಿ ಎಮ್.ಎಸ್.ಸ್ವಾಗತಿಸಿ ವಾಣಿಶ್ರೀ ಅವರನ್ನು ಪರಿಚಯಿಸಿದರು. ಬಿಂದು ಕುಮಾರಿ ವಂದಿಸಿದರು. ಎಸ್.ಡಿ.ಎಮ್.ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಎಸ್.ಡಿ.ಎಮ್.ಸಿ, ಗ್ರಾಮೋತ್ಸವ ಸಮಿತಿ, ಹಳೆವಿದ್ಯಾರ್ಥಿ ಸಂಘ ಹಾಗೂ ಫ್ರೆಂಡ್ಸ್ ವಾಲ್ಪಾಡಿಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments