ಮೂಡುಬಿದಿರೆ ಗಣೇಶೋತ್ಸವದ ವಜೃ ಮಹೋತ್ಸವ ಸಮಾರೋಪ, ಸ್ಥಾಪಕಾಧ್ಯಕ್ಷರಿಗೆ ಸನ್ಮಾನ
ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವದ ವಜ್ರ ಮಹೋತ್ಸವದ ಕಾರ್ಯಕ್ರಮಗಳು ಶನಿವಾರ ಸಮಾಪನಗೊಂಡಿತು.
ಮಾಜಿ ಸಚಿವ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷ ಡಾ.ಪದ್ಮನಾಭ ಉಡುಪ ಅವರನ್ನು ಸನ್ಮಾನಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಲಾಯಿತು.
ಕಟೀಲು ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಅವರು ಅತಿಥಿಯಾಗಿ ಭಾಗವಹಿಸಿ ಆಶೀರ್ವಚನ ನೀಡಿ ಗಣೇಶನ ಆರಾಧನೆಯನ್ನು ಸಾರ್ವಜನಿಕವಾಗಿ ಆರಂಭಿಸಿದವರು ಬಾಲ ಗಂಗಾಧರ ತಿಲಕರು. ಸನಾತನ ಧರ್ಮ ಅತ್ಯಂತ ಪುರಾತನವಾದುದಯ ಇದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಾವು ಧರ್ಮದ ತಳಹದಿಯನ್ನು ಬಿಟ್ಟು ಬೇರೆ ಕಡೆಗೆ ಯೋಚನೆ ಮಾಡದೆ ಈ ಧರ್ಮವನ್ನು ನಾವು ನಮ್ಮ ಜೀವನದಲ್ಲಿ ಜೀವನಪರ್ಯಂತ ಅಳವಡಿಸಿಕೊಂಡು ಎಲ್ಲರೂ ಒಟ್ಟಾಗಿ ಧಾರ್ಮಿಕ ಚಿಂತನೆಯಲ್ಲಿ ಬೆರೆತುಕೊಂಡು ನಮ್ಮ ಪರಂಪರೆಯನ್ನು ಉಳಿಸಿ ಬೆಳಸಬೇಕೆಂದು ಸಲಹೆ ನೀಡಿದರು.
ಇತಿಹಾಸ ತಜ್ಞ ಪುಂಡಿಕೈ ಗಣಪಯ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ಶಾಸಕ ಉಮಾನಾಥ ಎ.ಕೋಟ್ಯಾನ್ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಚೌಟರ ಅರಮನೆಯ ಕುಲದೀಪ ಎಂ, ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಬಿ., , ಉದ್ಯಮಿ ಪ್ರಭಾತ್ ಚಂದ್ರ ಜೈನ್ ಸಾಂಧರ್ಬಿಕವಾಗಿ ಮಾತನಾಡಿದರು.
ಜಯಶ್ರೀ ಅಮರನಾಥ ಶೆಟ್ಟಿ, ಸಮಿತಿಯ ಉಪಾಧ್ಯಕ್ಷ ಸುಕುಮಾರ್ ರಾವ್, ಕಾರ್ಯಕ್ರಮದ ಸಂಚಾಲಕ ಲಕ್ಷ್ಮಣ್ ಪೂಜಾರಿ, ಉಪಸ್ಥಿತರಿದ್ದರು.
60 ವರ್ಷಗಳಲ್ಲಿ ಗಣ್ಯ ಸೇವೆ ಸಲ್ಲಿಸಿದವರನ್ನು ಸಮಿತಿಯ ವತಿಯಿಂದ ಗುರುತಿಸಿ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಂ. ಸ್ವಾಗತಿಸಿದರು. ಶಿಕ್ಷಕ ಪ್ರಸನ್ನ ಶೆಣೈ ಬಹುಮಾನಿತರ ವಿವರ ನೀಡಿದರು. ಕೆ.ಕೃಷ್ಣರಾಜ ಹೆಗ್ಡೆ ಸನ್ಮಾನಿತರ ಪತ್ರ ವಾಚಿಸಿದರು. ವಾದಿರಾಜ ಕಲ್ಕೂರಾಯ ಕಾರ್ಯಕ್ರಮ ನಿರೂಪಿಸಿದರು. ದಿವಾಕರ ಶೆಟ್ಟಿ ತೋಡಾರು ವಂದಿಸಿದರು.
0 Comments