ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಕಾರ್ಯಕ್ರಮ
ಮೂಡುಬಿದಿರೆ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಂಗವಾಗಿ ತೆಂಕ ಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರ್ಕೆರೆ, ಅಶ್ವತಪುರ ಮುಖ್ಯ ರಸ್ತೆಯಲ್ಲಿ ಹಾಗೂ ಮಿಜಾರು ಜಂಕ್ಷನ್ ನಿಂದ ಮೈಟ್ ಇಂಜಿನಿಯರಿಂಗ್ ಕಾಲೇಜು ವರೆಗೆ ರಸ್ತೆ ಬದಿ ಭಾನುವಾರ ಸ್ವಚ್ಛಗೊಳಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ಮತ್ತು ಸದಸ್ಯರು ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ವಿಭಾಗದ ಎನ್ ಎಸ್ ಎಸ್ ವಿದ್ಯಾರ್ಥಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು, ಊರಿನ ಸಂಘ ಸಂಸ್ಥೆಗಳು, ಎಂ.ಆರ್.ಎಲ್ ಎಂ ಘಟಕದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
0 Comments