ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಆಳ್ವಾಸ್ ಕಾಲೇಜ್ ಆಫ್ ಎಲೈಡ್ ಮೆಡಿಕಲ್ ಸೈನ್ಸ್ ವಿಭಾಗದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆಯುವ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ 2023-24 ಗುರುವಾರ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ರಾಜೀವ್ ಗಾಂಧಿ ಆರೋಗ್ಯ ವಿವಿಯ ಮೈಸೂರು ವಿಭಾಗದ ಸಹ ಸಂಯೋಜಕ ಡಾ.ಸುರೇಶ್ ಎಸ್.ಎಂ. ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಭಾರತ ದೇಶದ ಜನಪ್ರಿಯ ಕ್ರೀಡೆಯಾಗಿರುವ ಕಬಡ್ಡಿಯನ್ನು ಎಲ್ಲರೂ ಪ್ರೀತಿಸುತ್ತಾರೆ. ಗ್ರಾಮಾಂತರ ಪ್ರದೇಶದಲ್ಲಿ ಈ ಕ್ರೀಡೆಯನ್ನು ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಆಡುತ್ತಿದ್ದು ಪ್ರೊ.ಕಬಡ್ಡಿಯಿಂದಾಗಿ ಇದೀಗ ಜನಪ್ರಿಯತೆ ದುಪ್ಪಟ್ಟಾಗಿದೆ ಎಂದು ಹೇಳಿದರು.
ಕ್ರೀಡಾಪಟುಗಳು ವಿವಿಗಳ ನೀತಿ ನಿಯಮಗಳಿಗೆ ಗೌರವ ನೀಡಿ. ಕ್ರೀಡೆಯಲ್ಲಿ ಸೋಲು ಗೆಲುವು ಇದ್ದದ್ದೆ ಇದಕ್ಕೆ ಕ್ರೀಡಾಪಟುಗಳು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಇಂದು ಸೋತವರಿಗೆ ಮುಂದೆ ಗೆಲ್ಲುವ ಅವಕಾಶವಿದೆ ಎಂದು ಹೇಳಿದ ಅವರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜುಗಳು ಭಾಗವಹಿಸಿವೆ. ವಿವಿಯ ದೈಹಿಕ ಶಿಕ್ಷಣ ಶಿಕ್ಷಕರುಗಳು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ವಿವಿಯ ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿ ಕ್ರೀಡಾಕ್ಷೇತ್ರವನ್ನು ಪ್ರಗತಿಯತ್ತ ಕೊಂಡೋಯ್ಯಬೇಕಾಗಿದೆ ಎಂದು ಸಲಹೆ ನೀಡಿದರು.
ಆಳ್ವಾಸ್ ಕಾಲೇಜ್ ಅಫ್ ಎಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲ ಡಾ.ಶಂಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್. ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ಎಸ್. ಉಪಸ್ಥಿತರಿದ್ದರು.
ಫಾತಿಮಾ ಮುಶ್ಕಾನ್ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ನ ಉಪ ಪ್ರಾಂಶುಪಾಲೆ ಡಾ.ವನಿತಾ ಧನ್ಯವಾದಗೈದರು.
0 Comments