ದರೆಗುಡ್ಡೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
ಮೂಡುಬಿದಿರೆ: ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾಟವು ಶನಿವಾರ ಸರ್ಕಾರಿ ಪ್ರೌಢಶಾಲೆ ದರೆಗುಡ್ಡೆಯಲ್ಲಿ ನಡೆಯಿತು.
ದರೆಗುಡ್ಡೆ ಗ್ರಾ.ಪಂ.ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಪಂದ್ಯಾಟವನ್ನು ಉದ್ಘಾಟಿಸಿದರು.
ಉಪಾಧ್ಯಕ್ಷೆ ನಳಿನಿ, ಸದಸ್ಯರಾದ ಸುಭಾಷ್ ಚಂದ್ರ ಚೌಟ, ವಾಲ್ಪಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಪ್ರದೀಪ್, ಶಾಲಾ ಎಸ್. ಡಿ.ಎಂ.ಸಿ.ಉಪಾಧ್ಯಕ್ಷ ಮಧುರಾ, ಸದಸ್ಯ ಸಮಿತ್ ರಾಜ್ ದರೆಗುಡ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ರಾಜಶ್ರೀ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪುತ್ರನ್, ಬೋರುಗುಡ್ಡೆ ಕ್ಲಸ್ಟರ್ ನ ಸಿಆರ್ ಪಿ ಆದಶ್ ೯, ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕರುಣಾಕರ ದೇವಾಡಿಗ ಸ್ವಾಗತಿಸಿದರು. ಕನ್ನಡ ಭಾಷಾ ಶಿಕ್ಷಕ ರಮೇಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷಾ ಶಿಕ್ಷಕ ಅರುಣ. ಡಿ ವಂದಿಸಿದರು.
ಪಂದ್ಯಾಟದಲ್ಲಿ ಸುಮಾರು 45 ಕ್ಕೂ ಹೆಚ್ಚು ತಾಲೂಕಿನ ತಂಡಗಳು ಭಾಗವಹಿಸಿದವು.
0 Comments