ಅ.30,31 ರಂದು ಮೂಡುಬಿದಿರೆಯಲ್ಲಿ ಜಿಲ್ಲಾ ಮಟ್ಟದ ಪ್ರಾ.ಪ್ರೌ. ಶಾಲಾ ವಿಭಾಗದ ಕ್ರೀಡಾಕೂಟ
ಮೂಡುಬಿದಿರೆ: ಅ.30,31ರಂದು ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ನ.1 ರಂದು ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ ಎಂದು ರೋಟರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅನಂತಕೃಷ್ಣ ರಾವ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದ.ಕ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ, ಮಂಗಳೂರು ದ.ಕ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಸಹಯೋಗದೊಂದಿಗೆ ಕ್ರೀಡಾಕೂಟ ನಡೆಯಲಿದೆ. ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಉಪಸ್ಥಿತಿಯಲ್ಲಿ ಅ.30ರಂದು ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಎಸ್. ಧ್ವಜಾರೋಹಣಗೈಯಲಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆವಹಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ, ಜಿಲ್ಲೆಯ ವಿವಿಧ ಕ್ಷೇತ್ರದ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯ ಅತಿಥಿಗಳಾಗಿರುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಕ್ರೀಡಾಪಟುಗಳಿಂದ ವಂದನೆ ಸ್ವೀಕರಿಸಲಿದ್ದು, ರಾಷ್ಟಿçÃಯ ಕ್ರೀಡಾಪಟು ಅಮ್ರೀನ್ ಕ್ರೀಡಾ ಜ್ಯೋತಿ ಬೆಳಗಲಿದ್ದಾರೆ. ವಕೀಲ ಶರತ್ ಡಿ.ಶೆಟ್ಟಿ ಟ್ರೋಫಿಗಳ ಅನಾವರಣ ಮಾಡಲಿದ್ದಾರೆ. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಎಂಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೆöÊ ಮಹಿಲನ್ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ರೋಟರಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ನಾರಾಯಣ ಪಿ.ಎಂ ಅಧ್ಯಕ್ಷತೆಯಲ್ಲಿ ಅ.31ರಂದು ಮಧ್ಯಾಹ್ನ 3.30ಕ್ಕೆ ನಡೆಯುವ ಸಮಾರೋಪ ಸಮಾರಮಭದಲ್ಲಿ ಪುರಸಭೆ ಸದಸ್ಯೆ ಸ್ವಾತಿ ಪ್ರಭು, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಬಿ., ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಮುಕ್ಯ ಅತಿಥಿಗಳಾಗಿರುವರು.
ನ.1ರಂದು ಬೆಳಗ್ಗೆ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟವನ್ನು ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಮುಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ. ಉದ್ಘಾಟಿಸುವರು ಎಂದು ಅನಂತಕೃಷ್ಣ ರಾವ್ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಪ್ರವೀಣ್‌ಚಂದ್ರ ಜೈನ್, ಮುಖ್ಯ ಶಿಕ್ಷಕಿ ತಿಲಕಾ ಜೈನ್, ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್, ರೋಟರಿ ಪಿಯು ನಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಾಹನ್, ಆಡಳಿತಾಧಿಕಾರಿ ನಿತೇಶ್ ಮಾರ್ನಾಡ್, ಶಿಕ್ಷಕ ಗಜಾನನ ಮರಾಠೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
0 Comments