ಎಕ್ಸಲೆಂಟ್ ನಲ್ಲಿ
ರಾಷ್ಟ್ರೀಯ ಸೇವಾ ಯೋಜನೆ ನೂತನ ಘಟಕದ ಉದ್ಘಾಟನೆ
ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಬೆ0ಗಳೂರು (ಪದವಿಪೂರ್ವ ವಿಭಾಗ) ಇದರ ರಾಜ್ಯ ಸಂಯೋಜನಾಧಿಕಾರಿ ಡಾ. ಗುಬ್ಬಿಗೂಡು ರಮೇಶ್ ಸಿ ಜಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಸೇವೆ ಮತ್ತು ಶ್ರದ್ಧೆ ಇದ್ದಲ್ಲಿ ಜೀವನದಲ್ಲಿ ಉನ್ನತ ಮಟ್ಟವನ್ನು ತಲುಪಬಹುದು. ರಾಷ್ಟ್ರೀಯ ಸೇವಾ ಯೋಜನೆಯು ಉತ್ತಮ ಮನುಷ್ಯ ಸಂಬಂಧವನ್ನು ಬೆಳೆಸುತ್ತದೆ. ಎಲ್ಲಾ ಸ್ವಯಂ ಸೇವಕರಿಗೂ ಸಮಾನ ಅವಕಾಶವನ್ನು ಕಲ್ಪಿಸುವುದರ ಮೂಲಕ ಸಭಾ ಕಂಪನವನ್ನು ಹೋಗಲಾಡಿಸುವುದಷ್ಟೇ ಅಲ್ಲದೇ ಸಂವಹನ ಕೌಶಲವನ್ನು ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದರು.
ವಿದ್ಯಾಭ್ಯಾಸವನ್ನು ಪಡೆದುಕೊಂಡು ಜೀವನದಲ್ಲಿ ನೆಲೆ ನಿಲ್ಲುವುದರ ಜೊತೆಗೆ ತನ್ನ ಸಮುದಾಯದ ಅಭಿವೃದ್ಧಿಗೆ ಶ್ರಮದಾನ ಮಾಡುವುದೇ ರಾಷ್ಟಿಯ ಸೇವಾ ಯೋಜನೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಮಾತನಾಡಿ ಜ್ಞಾನಕ್ಕೆ ಸಮಾನವಾದದ್ದು ಯಾವುದೂ ಇಲ್ಲ ಎನ್ನುವುದು ಸಂಸ್ಥೆಯ ಧ್ಯೇಯ ವಾಕ್ಯ. ಹಾಗೆಯೇ ರಾಷ್ಟ್ರೀಯ ಸೇವಾ ಯೋಜನೆಯು ನನಗಲ್ಲ ನಿನಗೆ ಅನ್ನುವ ಧ್ಯೇಯ ವಾಕ್ಯದೊಂದಿಗೆ ಬದುಕನ್ನು ಸೇವೆಗಾಗಿ ಮುಡಿಪಾಗಿಡುವುದರ ಬಗ್ಗೆ ತಿಳಿಸಿಕೊಡುತ್ತದೆ. ಜ್ಞಾನವನ್ನು ಹಂಚಿಕೊಳ್ಳುವುದರ ಜೊತೆಗೆ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡರೆ ಮುಂದೊಂದು ದಿನ ತಾನು ಬಯಸದೇ ಇರುವಂಥಹ ಭಾಗ್ಯ ದೊರೆಯುತ್ತದೆ. ದೇಶಕ್ಕೆ ಸೇವೆ ಸಲ್ಲಿಸುವುದರಿಂದ ಸಮಾಜ ನಿಮ್ಮನ್ನು ಸದಾ ಸ್ಮರಿಸುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆಯ(ಪದವಿಪೂರ್ವ) ಆಡಳಿತ ಉಪನಿರ್ದೇಶಕ ರಾಜು, ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರು (ಮಾನ್ಯತೆ ಮತ್ತು ಅನುದಾನ) ಮಹಮ್ಮದ್ ಜಿಯಾಉಲ್ಲಾಖಾನ್, ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರು (ಶೈಕ್ಷಣಿಕ) ಆನ0ದ ಪಿ,
ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗದ ಅಧಿಕಾರಿಗಳಾದ ಸವಿತಾ ಎರ್ಮಾಳ್,
ಎಕ್ಸಲೆ0ಟ್ ಸಮೂಹ ಶಿಕ್ಷಣ ಸ0ಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಸಿ ಡಿ ಜಯಣ್ಣ, ಪದವಿಪೂರ್ವ ಶಿಕ್ಷಣ ಇಲಾಖೆಯ ಅಧೀಕ್ಷಕರಾದ ಗೋಪಾಲಕೃಷ್ಣ, ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ತೇಜಸ್ವೀ ಭಟ್ ವಂದಿಸಿದರು. ಉಪನ್ಯಾಸಕ ಡಾ ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.
0 Comments