ಕ್ರಿಕೆಟ್ ಬೆಟ್ಟಿಂಗ್ : ಇಬ್ಬರು ಪೊಲೀಸರ ವಶಕ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಕ್ರಿಕೆಟ್ ಬೆಟ್ಟಿಂಗ್ : ಇಬ್ಬರು ಪೊಲೀಸರ ವಶಕ್ಕೆ 


ಮೂಡುಬಿದಿರೆ:  ಮೊಬೈಲ್ ವೆಬ್ ಸೈಟ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಇಬ್ಬರನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಪುತ್ತಿಗೆ ಗ್ರಾ.ಪಂನ ಪಲಕಳ ನಿವಾಸಿ ಪುರಂದರ ಕುಲಾಲ್, ಆಲಂಗಾರು ಉರಿಬೆಟ್ಟು ನಿವಾಸಿ ಸುಕೇಶ್ ಆಚಾರ್ಯ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡು ಇದೀಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡವರು. 

ಮಾರ್ಪಾಡಿ ಗ್ರಾಮದ ಒಂಟಿಕಟ್ಟೆಯ ಕಡಲಕೆರೆ ಪಾರ್ಕ್ ನಲ್ಲಿ ಸುಖೇಶ್ ಆಚಾರ್ಯ ಎಂಬಾತನು ಪುರಂದರ್ ಎಂಬಾತನಿಂದ ಹಣವನ್ನು ಪಡೆದು allpaanel.com/m/home ಎಂಬ ಮೋಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೇಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಸುಖೇಶ್ ಆಚಾರ್ಯ ಎಂಬಾತನನ್ನು ಹಿಡಿದು ವಿಚಾರಿಸಿದಾಗ ಆ ದಿನ  ನಡೆಯುತ್ತಿದ್ದ ಶ್ರೀಲಂಕ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣವನ್ನು ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ಒಪ್ಪಿಕೊಂಡಿದ್ದು, allpaanel.com/m/home ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿರುತ್ತಾನೆ.

 ಅದೇ ಪ್ರಕಾರ ಆರೋಪಿ ಸುಖೇಶ್ ಆಚಾರ್ಯ ನ ಬಳಿ ಇರುವ ಮೋಬೈಲ್ ನ ಗೂಗಲ್ ಕ್ರೋಮ್ ನಲ್ಲಿ allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್ ಗೆ ತೊಡಗಿಸಿಕೊಂಡಿರುವ ಬಗ್ಗೆ ಕಂಡುಬಂದಿದ್ದು, ಆ ದಿನ ಶ್ರೀಲಂಕ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನಡೆದಿದ್ದು ಈ ಮ್ಯಾಚ್ ಗಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿರುತ್ತಾನೆ. 

ಈ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಮೂಡುಬಿದಿರೆ ಬೇc dev n BH c hi .ಪೊಲೀಸ್ ಠಾಣೆ ಅ.ಕ 158/2023  ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ  ನ್ಯಾಯಾಲಯದ ಅನುಮತಿ ಪಡೆದು  ಕಾನೂನು ಕ್ರಮ ಜರುಗಿಸಿದ್ದು ಮೊಬೈಲ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗ್ಗಿkm. Vhc GT

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ,  ಡಿಸಿಪಿ  ಸಿದ್ದಾರ್ಥ ಗೊಯಲ್, ಐಪಿಎಸ್ (ಕಾ&ಸು),  ದಿನೇಶ್ ಕುಮಾರ್ (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ  ಮನೋಜ್ ಕುಮಾರ್ ನಾಯ್ಕ್ ಅವರ ನಿರ್ದೇಶನದಂತೆ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕ  ಸಂದೇಶ್ ಪಿ.ಜಿ. ಅವರ ಆದೇಶದಂತೆ  ಮೂಡುಬಿದಿರೆ ಠಾಣಾ ಪೊಲೀಸ್ ಉಪ ನಿರೀಕ್ಷಕ ಸಿದ್ದಪ್ಪ ನರನೂರ ಅವರು ಹಾಗೂ ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಝೈದ್, ವೆಂಕಟೇಶ್ ಅವರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.R

Post a Comment

0 Comments