ಜಿಲ್ಲೆಗೆ ಬರಲಿದೆ ಮತ್ತೊಂದು ಚತುಷ್ಪಥ: ಸಂಸದ ನಳಿನ್ ಮನವಿ ಪುರಸ್ಕರಿಸಿದ ಕೇಂದ್ರ
ಅನೇಕ ಚತುಷ್ಪಥ ರಸ್ತೆ ಕಾಮಗಾರಿಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಈಗ ಮತ್ತೊಂದು ಕೊಡುಗೆ ಸಿಗುವ ಸಮಯ ಸನಿಹದಲ್ಲಿದೆ. ಈ ಬಗ್ಗೆ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಟ್ವೀಟ್ ಮಾಡಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬಹು ಬೇಡಿಕೆಯ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೈಸೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಮಾಣಿ-ಮೈಸೂರು-ಬೆಂಗಳೂರು ರಸ್ತೆಯ ಚತುಷ್ಪಥಗೊಳಿಸಲು ಯೋಜನೆ ವರದಿ (DPR) ಸಿದ್ಧಪಡಿಸಲು ಟೆಂಡರ್ ಕರೆಯಲು ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಸಂಸದರು ಮನವಿಯನ್ನು ಪುರಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
0 Comments