ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಜಾಹೀರಾತು/Advertisment
ಜಾಹೀರಾತು/Advertisment

 ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ

ಆಳ್ವಾಸ್‌ಗೆ ಅವಳಿ ಪ್ರಶಸ್ತಿ



ಮೂಡುಬಿದಿರೆ: ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಕಪಿತಾನಿಯೋ ಪ.ಪೂ. ಕಾಲೇಜನ್ನು ೧ ಇನ್ನಿಂಗ್ಸ್ ಹಾಗೂ ೬ ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. 

ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಕಡಬ ತಾಲೂಕನ್ನು ಪ್ರತಿನಿಧಿಸಿದ ಬೆಥನಿ ಪ.ಪೂ. ಕಾಲೇಜು ತಂಡವನ್ನು ೧ ಇನ್ನಿಂಗ್ಸ್ ಹಾಗೂ ೦೨ ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಹುಮಾನ ಸಮಾರಂಭದಲ್ಲಿ ವಾಮದಪದವು ಪದವಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಎಚ್.ಬಿ., ವಿವೇಕಾನಂದ ಪಿಯು ಕಾಲೇಜಿನ ದೈಹಿಕ ಶಿಕ್ಷಕ ಶಾಂತರಾಮ ರೈ, ಎಕ್ಸಲೆಂಟ್ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಕಾಲೇಜಿನ ಉಪನ್ಯಾಸಕ ಎಸ್.ಎಸ್. ಪಾಟೀಲ್, ಬೆಥನಿ ಪ.ಪೂ. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಪುನೀತ್, ತರಬೇತುದಾರ ಪ್ರದೀಪ್ ಪ್ರಶಸ್ತಿಯನ್ನು ವಿತರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ರೈ, ಹರ್ಷಿತಾ ಶೆಟ್ಟಿ, ನವೀನ್ ಉಪಸ್ಥಿತರಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಆಳ್ವಾಸ್ ಪಿಯು ಕಾಲೇಜಿನ ಆಶ್ರಯದಲ್ಲಿ ಪಂದ್ಯಾಟವನ್ನು ಆಯೋಜಿಸಲಾಯಿತು.

Post a Comment

0 Comments