ಎಂ.ಕೆ. ಅನಂತ್ರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment

 ವಿದ್ಯಾರ್ಥಿ ಸಂಘ ಉದ್ಘಾಟನೆ



ಮೂಡುಬಿದಿರೆ: ಎಂ.ಕೆ. ಅನಂತ್ರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಶನಿವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

     ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ತನ್ನ ತಂದೆಯ ಹೆಸರಿನಲ್ಲಿ ನಡೆಯುತ್ತಿರುವ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ ಶಿಸ್ತಿನ ಸಿಪಾಯಿಗಳೆಂದರೆ ದೈಹಿಕ ಶಿಕ್ಷಣ ಶಿಕ್ಷಕರು. ಇಲ್ಲಿನ ವಿದ್ಯಾರ್ಥಿಗಳು ವಿವಿಧ ಕಡೆಗಳಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿ  ಮತ್ತು ಕಂಬಳ ಕ್ರೀಡೆಗಳಲ್ಲಿ ಸ್ವಯಂಸೇವಕರುಗಳಾಗಿ ಸೇವೆ ನೀಡುತ್ತಾರೆ. ರಾಜ್ಯದಲ್ಲಿ ಒಟ್ಟು 8 ಸಿಪಿಎಡ್ ಕಾಲೇಜ್ ಗಳಿದ್ದು ಅದರಲ್ಲಿ ಈಗಾಗಲೇ 7 ಕಾಲೇಜುಗಳು ಮುಚ್ಚಲ್ಪಟ್ಟಿದೆ. ಈ ಕಾಲೇಜಿನಲ್ಲಿಯೂ ವಿದ್ಯಾರ್ಥಿಗಳ ಕೊರತೆಯಿದೆ ಆದರೆ ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು.

ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

  ಎಸ್.ಎನ್.ಎಂ.ಪಿ.ಕಾಲೇಜಿನ ಪ್ರಾಂಶುಪಾಲ ಜೆ.ಜೆ.ಪಿಂಟೋ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಿಥುನ್ ರಾಜ್, ದೈ.ಶಿ.ಉಪನ್ಯಾಸಕ ಅಕ್ಷಿತ್ ರೈ ಉಪಸ್ಥಿತರಿದ್ದರು. 

  ಎಂ.ಕೆ.ಎ.ದೈ.ಶಿ.ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments