ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಪುತ್ತಿಗೆ ಪಂಚಾಯತ್
ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಸೋಮವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ರಾಧ ಮತ್ತು ಪಿಡಿಒ ಭೀಮ ನಾಯ್ಕ್ ಕಂದಾಯ ಸಚಿವರಿಂದ ಪುರಸ್ಕಾರವನ್ನು ಸ್ವೀಕರಿಸಿದ್ದಾರೆ.
ಪಂಚಾಯತ್ ನ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ,ಉಪಾಧ್ಯಕ್ಷ ದಯಾನಂದ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ ಒದಗಿಸಿರುವುದು ಹಾಗೂ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡು ಸರ್ವೋತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಿರುವುದನ್ನು ಗುರುತಿಸಿ ಪುತ್ತಿಗೆ ಪಂಚಾಯತ್ ನ್ನು ಆಯ್ಕೆ ಮಾಡಲಾಗಿತ್ತು.
0 Comments