ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಶಾರದ ಪೂಜೆ
ಮೂಡುಬಿದಿರೆ: ಆಧ್ಯಾತ್ಮಿಕದೆಡೆಗಿನ ಸೆಳೆತ ಮಕ್ಕಳಲ್ಲಿ ಶೈಕ್ಷಣಿಕ ಅಭಿವೃದ್ಧಿ ಏಕಾಗ್ರತೆಗೆ ಸಹಕಾರಿ. ಈ ನಿಟ್ಟಿನಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ವಿಶೇಷ ಕಾಳಜಿಯನ್ನು ವಹಿಸಿ ಧರ್ಮ ಹಾಗೂ ಸಂಸ್ಕಾರಗಳಿಗೆ ಸಂಬಂಧಿಸಿದಂತೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಒಲವನ್ನು ಮೂಡಿಸುತ್ತಿದೆ ಎಂದು ಅಂಡಾರು ವಿಶ್ವನಾಥ ತಂತ್ರಿ ಅಭಿಪ್ರಾಯಪಟ್ಟರು.
ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾಸಂಸ್ಥೆಯಲ್ಲಿ ಜರಗಿದ ಶಾರದಾ ಪೂಜಾ ಮಹೋತ್ಸವದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.
ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳಲ್ಲಿ ಸಾಂಸ್ಕೃತಿಕ, ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವುದರ ಮೂಲಕ ಸನಾತನ ಭಾರತೀಯ ಸಂಸ್ಕೃತಿಯನ್ನು ವಿಶ್ವದೆಲ್ಲೆಡೆ ಪಸರಿಸುವಂತೆ ಮಾಡಬೇಕಾದುದು ಪ್ರಸಕ್ತ ಕಾಲ ಘಟ್ಟದಲ್ಲಿರುವ ಅನಿವಾರ್ಯತೆ. ಈ ನಿಟ್ಟಿನಲ್ಲಿ ಎಕ್ಸಲೆಂಟ್ ಸಂಸ್ಥೆಯಲ್ಲಿ ಜರಗುವ ಭಜನಾ ಕಾರ್ಯಕ್ರಮ, ಧಾರ್ಮಿಕ ಕ್ಷೇತ್ರಗಳಿಗೆ ಪಾದಯಾತ್ರೆಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳನ್ನು ಮೂಡಿಸುತ್ತಿದೆ ಎಂದರು.
ವೈದಿಕ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ನಾಗೇಂದ್ರ ಕುಮಾರ್ ಇಂದ್ರ, ವಿಶ್ವನಾಥ ತಂತ್ರಿ ಅಂಡಾರು, ಮತ್ತು ಸಮಾಜ ಸೇವಕಿ ಗೌರ ಗೋವರ್ಧನ್ ಕೆ. ಅವರನ್ನು ಸನ್ಮಾನಿಸಲಾಯಿತು.
ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಸಂಪತ್ ಕುಮಾರ್ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್ ಉಪಸ್ಥಿತರಿದ್ದರು.
ಸಹ ಮುಖ್ಯ ಶಿಕ್ಷಕ ಜಯಶೀಲ್ ನಿರೂಪಿಸಿದರು.
ಶಾರದಾ ಪೂಜೆ ಹಾಗೂ ಭಜನಾ ಕಾರ್ಯಕ್ರಮದಲ್ಲಿ 2,500 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಜರಗಿದ ಭಜನಾ ಸ್ಪರ್ಧೆ, ಸಾಂಪ್ರಾದಾಯಿಕ ಮೆರವಣಿಗೆಯಲ್ಲಿ ಶಾರದಾ ದೇವಿಯ ಆಗಮನ, ಸಂಸ್ಥೆಯ ವಿದ್ಯಾರ್ಥಿಗಳಿಂದ ಜರಗಿದ ಸಾಂಸ್ಕçತಿಕ ಕಾರ್ಯಕ್ರಮಗಳು ಶಾರದಾ ಪೂಜಾ ಮಹೋತ್ಸವದ ವೈಭವಕ್ಕೆ ಸಾಕ್ಷಿಯಾದವು.
0 Comments