ಜನರಿಗೆ ಅನ್ಯಾಯ ಆದಾಗ ಕೈಕಟ್ಟಿ ಕೂರಬೇಕಿತ್ತಾ.?ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಗರಂ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಡ ಕುಟುಂಬಕ್ಕೆ ಮನೆ ನಿರ್ಮಿಸುವ ಸಲುವಾಗಿ ಅಲ್ಲಿನ ಶಾಸಕ ಹರೀಶ್ ಪೂಂಜಾ ಹೋರಾಟ ನಡೆಸಿದ್ದು ಇದೀಗ ಅವರ ವಿರುದ್ಧವೇ ಎಫ್‌ಐಆರ್ ದಾಖಲು ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸುದರ್ಶನ ಮೂಡುಬಿದಿರೆ "ನಾವು ಕರ್ನಾಟಕದಲ್ಲಿ ಇದ್ದೇವೋ ಅಥವಾ ಗೂಂಡಾ ರಾಜ್ಯದಲ್ಲಿ ಇದ್ದೇವೋ ಎಂಬ ಸಂಶಯ ಮೂಡುತ್ತಿದೆ. ಬಡವರ ಪರವಾಗಿ ಧ್ವನಿ ಎತ್ತಿದ ಶಾಸಕರನ್ನು ಜೈಲಿಗೆ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣವನ್ನು ನಡೆಸುತ್ತಿದೆ" ಎಂದು ಹೇಳಿದ್ದಾರೆ.
0 Comments