ಸ್ವಚ್ಛತಾ ಹಿ ಸೇವಾ ಯೋಜನೆ ಸಮಾರೋಪ, ಸ್ವಚ್ಛತಾ ಸಿಬಂದಿಗಳಿಗೆ ಗೌರವ

ಜಾಹೀರಾತು/Advertisment
ಜಾಹೀರಾತು/Advertisment

 ಸ್ವಚ್ಛತಾ ಹಿ ಸೇವಾ ಯೋಜನೆ ಸಮಾರೋಪ, ಸ್ವಚ್ಛತಾ ಸಿಬಂದಿಗಳಿಗೆ ಗೌರವ




ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂನಲ್ಲಿ  ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಹಿ ಸೇವಾ ಯೋಜನೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತ್ ನ  ಸ್ವಚ್ಛತಾ ಸಿಬ್ಬಂದಿಗಳನ್ನು ಗೌರವಿಸಲಾಯಿತು.


 ಶಾಲಾ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ವಿವಿಧ ಸ್ಪರ್ಧೆಗಳನ್ನು  ಆಯೋಜಿಸಿದ್ದು ಈ ಕಾರ್ಯಕ್ರಮದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ತೆಂಕ ಮಿಜಾರು ಗ್ರಾಮ ಪಂಚಾಯತ್ ನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತಯಾರಿಸಿದ ಬಟ್ಟೆ ಚೀಲಗಳನ್ನು ಅನಾವರಣಗೊಳಿಸಲಾಯಿತು. ಹಾಗೂ  ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಂತಹ ನಿರ್ಕೆರೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಡಾ.ಪ್ರತಿಮಾ ಮೇಡಂ ಅವರನ್ನು ಗೌರವಿಸಲಾಯಿತು.

ಸ್ವಚ್ಛತೆಯ ಬಗ್ಗೆ ಗ್ರಾಮ ಪಂಚಾಯತ್ ನ   ಸದಸ್ಯರು ಸಾರ್ವಜನಿಕರು ಹಾಗೂ ನಿರ್ಕೆರೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಯ ಮಕ್ಕಳೊಂದಿಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹಾತ್ಮ ಗಾಂಧೀ ಉದ್ಯೋಗ ಖಾತ್ರಿ ಯೋಜನೆಯ ವಿಶೇಷ ಗ್ರಾಮಸಭೆಯನ್ನು ಆಯೋಜಿಸಿ ಸಾರ್ವಜನಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಮಾಹಿತಿ ಹಾಗೂ ಹೊಸ ಬೇಡಿಕೆ ಅರ್ಜಿಗಳನ್ನು ಪಡೆದುಕೊಳ್ಳಲಾಯಿತು.

Post a Comment

0 Comments