ಮೂಡುಬಿದಿರೆ : ತಾಲೂಕು ಮಟ್ಟದ ಪ್ರಾಥಮಿಕ& ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ : ತಾಲೂಕು ಮಟ್ಟದ ಪ್ರಾಥಮಿಕ& ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ



ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಮೂಡುಮಾರ್ನಾಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಸ್ವರಾಜ್ಯ ಮೈದಾನದಲ್ಲಿ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ "ಕ್ರೀಡಾಕೂಟ 2023-24" ಬುಧವಾರ ಆರಂಭಗೊಂಡಿತು.

  ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.


ಪಡುಮಾರ್ನಾಡು ಗ್ರಾ.ಪಂ.ನ ಅಧ್ಯಕ್ಷ ವಾಸುದೇವ ಭಟ್, ಕೆಎಂಎಫ್ ನ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಭಾಸ್ಕರ ಎಸ್.ಕೋಟ್ಯಾನ್, ರೋಟರಿ ಶಿಕ್ಷಣ ಸಂಸ್ಥೆಯ ಸಂಚಾಲಕ ಪ್ರವೀಣ್ ಚಂದ್ರ ಜೈನ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಬಿ.,ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪುತ್ರನ್, ಸಿಆರ್ ಪಿ ಸೌಮ್ಯ, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.

Post a Comment

0 Comments