ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

ಜಾಹೀರಾತು/Advertisment
ಜಾಹೀರಾತು/Advertisment

 ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ





ಮೂಡುಬಿದಿರೆ: ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಆರಂಭಿಕ ದಿನಗಳಿಂದಲೇ ಕಾರ್ಪೊರೇಟ್ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ತಯಾರಿ ನಡೆಸಬೇಕು. ಇಂಗ್ಲೀಷ್‌ನಲ್ಲಿ ಸಂವಹನ ಕಲೆಯನ್ನು ರೂಢಿ ಮಾಡಿಕೊಳ್ಳುವುದರಿಂದ ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಲು ಸಾಧ್ಯ. ಪದವಿ ಶಿಕ್ಷಣದ ಜೊತೆ ಜೊತೆಗೆ ಸರ್ಟಿಫಿಕೆಟ್ ಕೋರ್ಸ್ಗಳನ್ನು ಕೂಡ ಕಲಿಯುವುದರಿಂದ ಸಂದರ್ಶನಗಳಲ್ಲಿ ಪ್ರಾಮುಖ್ಯತೆ ದೊರಕುತ್ತದೆ ಎಂದು ಮಂಗಳೂರಿನ ಆಸ್ತಾ ಅಕಾಡೆಮಿಯ ಎಚ್.ಆರ್ ಮೆನೇಜರ್ ಸುನೀಲ್ ಜೋನ್ ಜಾರ್ಜ್ ಅಭಿಪ್ರಾಯಪಟ್ಟರು. 

ಅವರು ಬನ್ನಡ್ಕದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್‌ನ ವತಿಯಿಂದ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 

ಕಾಲೇಜಿನ ಸಂಯೋಜಕ ಡಾ.ದಯಾನಂದ ನಾಯ್ಕ್ ಅಧ್ಯಕ್ಷತೆವಹಿಸಿದರು. ಕಾಲೇಜು ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಪ್ಲೇಸ್‌ಮೆಂಟ್ ಸೆಲ್‌ನ ಮೂಲಕ ಒದಗಿಸಲು ಈಗಾಗಲೇ ಹಲವು ಯೋಜನೆಯನ್ನು ರೂಪಿಸಿಕೊಂಡಿದೆ. ನಮ್ಮ ಕಾಲೇಜಿನಲ್ಲಿ ಶಿಕ್ಷಣ ಪಡೆಯುವ ಹೆಚ್ಚಿನ ಮಕ್ಕಳು ಗ್ರಾಮೀಣ ಪ್ರದೇಶದಿಂದ ಬರುವವರು. ಆದ್ದರಿಂದ ವಿದ್ಯಾರ್ಥಿಗಳಿಗೆ ಶೇ.100 ಉದ್ಯೋಗವಕಾಶಗಳನ್ನು ಒದಗಿಸಲು ಕಾಲೇಜು ಶ್ರಮಿಸುತ್ತದೆ. ವಿದ್ಯಾರ್ಥಿಗಳು ಕೂಡ ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ ಶ್ರೀಮತಿ ಆಶಾ ಶಾಲೇಟ್ ಡಿಸೋಜಾ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿನಿ ಹೃತಿಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಶಿಕಲಾ ಎನ್. ಉಪಸ್ಥಿತರಿದ್ದರು.

Post a Comment

0 Comments