ಮೂಡುಬಿದಿರೆಯಲ್ಲಿ 1757ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯಲ್ಲಿ 1757ನೇ ಮದ್ಯವರ್ಜನ ಶಿಬಿರ ಉದ್ಘಾಟನೆ




          ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ಬಿ.ಸಿ.ಟ್ರಸ್ಟ್ ಮೂಡುಬಿದಿರೆ ತಾಲೂಕು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ  1757 ನೇ ಮದ್ಯವರ್ಜನ ಶಿಬಿರವು ಮೂಡುಬಿದಿರೆಯ ಸ್ಕೌಟ್ ಗೈಡ್ಸ್ ಕನ್ನಡಭವನದಲ್ಲಿ ಶುಕ್ರವಾರ‌ ಆರಂಭಗೊಂಡಿತು. ಉದ್ಘಾಟನೆ ಗೊಂಡಿತು.

ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ ಶಿಬಿರವನ್ನು ಉದ್ಘಾಟಿಸಿದರು.

         

 ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಧನಕೀರ್ತಿ ಬಲಿಪ ಅಧ್ಯಕ್ಷತೆ  ವಹಿಸಿದ್ದರು. 

ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸುಭಾಷ್ ಚಂದ್ರ ಚೌಟ, ಯೋಜನೆಯ ಜಿಲ್ಲಾ ನಿರ್ದೇಶಕ  ಮಹಾಬಲ ಕುಲಾಲ್, ಪುತ್ತಿಗೆ ಗ್ರಾಮ ಪಂಚಾಯತ್  ಅಧ್ಯಕ್ಷೆ ರಾಧಾ, ಸುದರ್ಶನ ಎಂ ಪಿ, ಪ್ರಸಾದ್ ಕುಮಾರ್, ಜನಜಾಗೃತಿ ಪದಾಧಿಕಾರಿಗಳಾದ ದಿನೇಶ್ ಆನಡ್ಕ, ಲಕ್ಷ್ಮಣ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯೋಜನೆಯ ಮೂಡುಬಿದಿರೆ ವಲಯ‌ ಮೇಲ್ವೀಚಾರಕ ವಿಠಲ್ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಸುನಿತಾ ನಾಯಕ್ ಸ್ವಾಗತಿಸಿದರು. ಜನ ಜಾಗೃತಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಲಯ ಮೇಲ್ವಿಚಾರಕಿ ಮಮತಾ ವಂದಿಸಿದರು, ಜ್ಞಾನವಿಕಾಸ ಸಮನ್ವಯಾಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. 

    


  ಶಿಬಿರದ ಚಿಕಿತ್ಸಾ ತಂಡದಲ್ಲಿ ಶಿಬಿರಾಧಿಕಾರಿ ದಿವಾಕರ್ ಪೂಜಾರಿ ಹಾಗೂ ಆರೋಗ್ಯ ಸಹಾಯಕಿ ಜಯಲಕ್ಷ್ಮಿ ಯವರು ಕರ್ತವ್ಯ ನಿರ್ವಹಿಸಲಿದ್ದಾರೆ. 

ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ನವ ಜೀವನ ಸಮಿತಿ ಸದಸ್ಯರು, ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0 Comments