ಡಿ. ೧೪-೧೭ರವರೆಗೆ
೨೯ನೇ ವರ್ಷದ ಆಳ್ವಾಸ್ ವಿರಾಸತ್ ೨೦೨೩
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ೨೯ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.೧೪ರಿಂದ ೧೭ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ
ಕೆ . ಶ್ರೀ ಪತಿ ಭಟ್ ವೇದಿಕೆಯಲ್ಲಿ ಪ್ರತಿದಿನ ಸಂಜೆ ೬ ಗಂಟೆಗೆ ಆರಂಭಗೊಳ್ಳುವ ಈ ಉತ್ಸವವು ರಾತ್ರಿ ೯.೩೦ಕ್ಕೆ ಮುಕ್ತಾಯಗೊಳ್ಳಲಿದೆ. ಬೃಹತ್ ವೇದಿಕೆಯೆದುರು ೫೦ ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು
ಕಣ್ತುಂಬಿಕೊಳ್ಳಲು ಅನುವಾಗುವಂತೆ ಆಸನದ ವ್ಯವಸ್ಥೆಯನ್ನು
ಮಾಡಲಾಗುವುದು. ಸಂಸ್ಕೃತಿ ಪ್ರಿಯರೂ ಕಲಾ ಪ್ರೇಮಿಗಳೂ ಹೆಚ್ಚಿನ
ಸಂಖ್ಯೆಯಲ್ಲಿ ಆಗಮಿಸಿ ಉತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು
ಆಳ್ವರು ತಿಳಿಸಿದರು.
0 Comments