ಪುರಸಭೆಯಿಂದ ದೀಪಾವಳಿಗೆ ನಿಯಮ ಸೂಚನೆ

ಜಾಹೀರಾತು/Advertisment
ಜಾಹೀರಾತು/Advertisment

ಪುರಸಭೆಯಿಂದ ದೀಪಾವಳಿಗೆ ನಿಯಮ ಸೂಚನೆ


ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ, ದೀಪಾವಳಿಯ ಸಂದರ್ಭ ರಾತ್ರಿ 10ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಯಾವುದೇ ರೀತಿಯ ಪಟಾಕಿಗಳನ್ನು ಸಿಡಿಸುವಂತಿಲ್ಲ. ಕೇವಲ ದೀಪಗಳನ್ನು ಮಾತ್ರ ಬೆಳಗಿಸಿ, ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸಿ, ವಾಯುಮಾಲಿನ್ಯ, ಶಬ್ದ ಮಾಲಿನ್ಯ ಆಗದಂತೆ ಪರಿಸರ ಮಾಲಿನ್ಯರಹಿತವಾಗಿ ದೀಪಾವಳಿ ಆಚರಿಸುವಂತೆ ಮೂಡುಬಿದಿರೆ ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. 


ದೀಪಾವಳಿ ಹಬ್ಬದ ಸಮಯದಲ್ಲಿ ಉತ್ಪತ್ತಿಯಾಗುವ ಹಸಿಕಸ, ಅಪಾಯಕಾರಿ ಕಸ ಎಂದು ಪ್ರತ್ಯೇಕವಾಗಿ ವಿಂಗಡಿಸಿ, ಪಟಾಕಿಗಳಿಂದ ಉಂಟಾದ ತ್ಯಾಜ್ಯವನ್ನು ಪ್ರತ್ಯೇಕ ಪಡಿಸಿ ಬೇರೆಯೇ ಚೀಲದಲ್ಲಿ ತುಂಬಿಸಿ ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Post a Comment

0 Comments