ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ

ಜಾಹೀರಾತು/Advertisment
ಜಾಹೀರಾತು/Advertisment

 ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ



ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ  ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು  ಹಾಗೂ‌ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.




 ಸ್ವರಾಜ್ಯ ಮೈದಾನದಲ್ಲಿ ಬುಧವಾರ  ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ  ಅತಿಥಿಗಳು ಪ್ರಶಸ್ತಿಯನ್ನು ವಿತರಿಸಿದರು. 


   ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಎಚ್.ಎಸ್  ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ  ಕ್ರೀಡಾಕೂಟದ ಮುಂದಿನ ಹಂತಗಳ ಬಗ್ಗೆ ಮಾಹಿತಿಯನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್, ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಬಂಟ್ವಾಳ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಮುಖ್ಯೋಪಾಧ್ಯಾಯಿನಿ ಡಾ.ರಾಜಶ್ರೀ ಬಿ.,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಕ್ಷೇತ್ರ ಸಮನ್ವಯಾಧಿಕಾರಿ ಸೌಮ್ಯಾ, ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ತಿಲಕಾ ಅನಂತವೀರ ಜೈನ್  ಉಪಸ್ಥಿತರಿದ್ದರು.


 ಹಿರಿಯ ಸಂಯೋಜಕ ಗಜಾನನ ಮರಾಠೆ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ದೈಹಿಕ ಶಿಕ್ಷಕ ಸುಧೀರ್ ಕುಮಾರ್ ವಂದಿಸಿದರು.

Post a Comment

0 Comments