ಮುಂದಿನ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲರನ್ನು ಗೆಲ್ಲಿಸೋಣ:ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ
"ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟೋಣ. ಮುಂಬರುವ ತಾಲೂಕು ಪಂಚಾಯತಿ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಗೆ ಅತ್ಯಧಿಕ ಸಂಖ್ಯೆಯ ಗೆಲುವು ಆಗಬೇಕು. ಮಾತ್ರವಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸನ್ಮಾನ್ಯ ನಳಿನ್ ಕುಮಾರ್ ಕಟೀಲುರವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಲ್ಲಿ ಕೆಲಸ ಮಾಡೋಣ "
ಇದು ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷಾದ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ರವರು ಆಡಿದ ಮಾತುಗಳು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಬದಲಾಗುತ್ತಾ ಎಂಬ ಪ್ರಶ್ನೆಗೆ ನೂತನ ರಾಜ್ಯಾಧ್ಯಕ್ಷರು ಪರೋಕ್ಷವಾಗಿ ಉತ್ತರ ನೀಡಿದ್ದು ಮುಂದಿನ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲುರವರನ್ನು ಗೆಲ್ಲಿಸುವಂತೆ ಕರೆ ಕೊಟ್ಟಿದ್ದು ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಂತಾಗಿದೆ.
0 Comments