ಸಂಸದ ನಳಿನ್ ಕುಮಾರ್ ಕಟೀಲರನ್ನು ಅಭಿನಂದಿಸಿದ RSS ಮುಖಂಡ ಡಾ.ಪ್ರಭಾಕರ್ ಭಟ್ ಕಲ್ಲಡ್ಕ
ಪುತ್ತೂರು ವಿವೇಕಾನಂದ ಕಾಲೇಜು ರಸ್ತೆಯಲ್ಲಿ ಸುಮಾರು 5.66 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಚಾಲನೆ ನೀಡಿದ್ದು; ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಇವರು ಸಂಸದರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ಸಾಜ ರಾಧಾಕೃಷ್ಣ ಆಳ್ವ, ಚನೀಲ ತಿಮ್ಮಪ್ಪ ಶೆಟ್ಟಿ, ಜೀವಂದರ್ ಜೈನ್, ಆರ್.ಸಿ ನಾರಾಯಣ್, ರೈಲ್ವೆ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
0 Comments