ಜ.5ರಂದು ಅಡ್ಯಾರ್‌ನಲ್ಲಿ ಕೆಯುಡಬ್ಲ್ಯುಜೆ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಮೂರು ದಿನಗಳ ಪತ್ರಕರ್ತರ ರಾಜ್ಯ ಕ್ರಿಕೆಟ್ ಟೂರ್ನಮೆಂಟ್
ಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯುಜೆ) ಸರ್ವ ಸದಸ್ಯರ 90ನೇ ವಾರ್ಷಿಕ ಮಹಾಸಭೆ ಜ.5ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಆಡ್ಯಾರ್‌ನ ಸಹ್ಯಾದ್ರಿ ಕಾಲೇಜ್ ಆಪ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಗೆ ಮುನ್ನ ಇದೇ ಸಭಾಂಗಣದಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಜರಗಲಿದೆ. ದ.ಕ. ಜಿಲ್ಲೆಯಲ್ಲಿ ಕೆಯುಡಬ್ಲ್ಯುಜೆ ವಾರ್ಷಿಕ ಮಹಾಸಭೆ ಮೊದಲ ಬಾರಿ ನಡೆಯುತ್ತಿದೆ. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಮತ್ತು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಸಭೆಯನ್ನು ಉದ್ಘಾಟಿಸಲಿರುವರು.
ಹಿಂದೆ ಇಲ್ಲಿ 35 ರಾಜ್ಯ ಸಮ್ಮೇಳನ ಮತ್ತು ಎರಡು ಬಾರಿ ರಾಜ್ಯ ಕಾರ್ಯಕಾರಿಣಿ ಸಭೆ ಅಪೂರ್ವ ಯಶಸ್ಸು ಗಳಿಸಿತ್ತು. ಇಲ್ಲಿ ನಡೆಯಲಿರುವ ವಾರ್ಷಿಕ ಮಹಾಸಭೆಯಲ್ಲಿ ದ.ಕ. ಜಿಲ್ಲೆಯ ಸಂಘದ ಎಲ್ಲ ಸದಸ್ಯರು ಭಾಗವಹಿಸುವ ಮೂಲಕ ಯಶಸ್ವಿಗೆ ಸಹಕರಿಸಬೇಕಾಗಿದೆ. *ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ: ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ರಾಜ್ಯ ಮಟ್ಟದ ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ ಟೂರ್ನಮೆಂಟ್ ಜ.5ರಿಂದ 7ರ ತನಕ (3 ದಿನಗಳ ) ಆಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಮೆಂಟ್‌ನಲ್ಲಿ 22 ತಂಡಗಳು ಪಾಲ್ಗೊಳ್ಳಲಿದೆ. ದ.ಕ.ಜಿಲ್ಲೆಯ ಕೆಡಬ್ಲ್ಯುಜೆಯ ಎಲ್ಲ ಸದಸ್ಯರು ವಾರ್ಷಿಕ ಮಹಾಸಭೆ ಮತ್ತು ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾಗವಹಿಸುವ ಮೂಲಕ ಇವುಗಳ ಯಶಸ್ವಿಗೆ ಸಹಕಾರ ನೀಡುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
0 Comments