ಪ್ರತಿಭಾನ್ವಿತ ಸ್ಕೌಟ್ಸ್ -ಗೈಡ್ಸ್ , ರೋವರ್ಸ್- ರೇಂಜರ್ಸ್ ಗಳಿಗೆ ರಾಜ್ಯಮಟ್ಟದ ಅಭಿನಂದನೆ
ಮೂಡುಬಿದಿರೆ: ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪ್ರತಿಭಾನ್ವಿತ ಸ್ಕೌಟ್ಸ್ -ಗೈಡ್ಸ್ ರೋವರ್ಸ್ -ರೇಂಜರ್ಸ್ ಗಳಿಗೆ ರಾಜ್ಯ ಮಟ್ಟದ ಅಭಿನಂದನಾ ಸಮಾರಂಭವು ಮೂಡುಬಿದಿರೆಯ ಕನ್ನಡ ಭವನದಲ್ಲಿ ಭಾನುವಾರ ನಡೆಯಿತು.
ಭಾರತ್ ಸ್ಕೌಟ್ಸ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ ವಿದ್ಯಾರ್ಥಿಗಳ ಬಗ್ಗೆ ಮತ್ತು ನಿಮ್ಮ ಶಕ್ತಿಯ ಬಗ್ಗೆ ನಮಗೆ ಅಪಾರ ಗೌರವವಿದೆ. ನಮ್ಮ ದೇಶದಲ್ಲಿ ಶೇ 60ರಷ್ಟು ಯುವ ಶಕ್ತಿಯಿದ್ದು ಯುವಶಕ್ತಿಯ ಉಪಯೋಗ ಈ ದೇಶಕ್ಕೆ ಆಗುವಂತೆ ಪ್ರಯತ್ನಿಸಬೇಕಾಗಿದೆ.
ಕಲಿಕೆ ಎಂಬುದು ಬಹಳ ಮುಖ್ಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೀವು ಇದ್ದೀರಿ ಎಂಬುದನ್ನು ತಿಳಿದುಕೊಳ್ಳಬೇಕು. ನೀವು ಯಾವುದೋ ಗುಂಗಿನಲ್ಲಿದ್ದು ಕಾಲವನ್ನು ಕಳೆಯಬೇಡಿ, ಚಂಚಲ ಮನಸ್ಸಿನಿಂದ ಹೊರಗಡೆ ಬಂದು ಬಯಲು ಶಾಲೆಯತ್ತ ಗಮನ ಹರಿಸಿ ಅಲ್ಲಿ ನಿಮಗೆ ಬೇಕಾಗುವ ಶಿಕ್ಷಣವನ್ನು ಪಡೆಯಲು ಅವಕಾಶವಿದೆ. ಹೊರ ದೇಶದ ಬಗ್ಗೆ ಗೌರವವಿರಲಿ ನಮ್ಮ ದೇಶದ ಬಗ್ಗೆ ಅಭಿಮಾನವಿರಲಿ ಇಲ್ಲಿ ನಮಗೆ ಬೇಕಾಗುವಷ್ಟು ಅವಕಾಶಗಳಿಗೆ ಅದನ್ನು ತಾವು ಸದುಪಯೋಗ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಜ್ಯ ಭಾರತ್ ಸ್ಕೌಟ್ಸ್ ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅಧ್ಯಕ್ಷತೆ ವಹಿಸಿ ಪ್ರಮಾಣಪತ್ರ ವಿತರಿಸಿದರು.
ಅಭಿನಂದನೆ : ಕ್ರೀಡೆಯಲ್ಲಿ ಮತ್ತು ಸ್ಕೌಟ್ಸ್ ಗೈಡ್ಸ್ ನಲ್ಲಿ ವಿಶೇಷ ಸಾಧನೆ ಮಾಡಿರುವ ಹಾಗೂ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಅನನ್ಯ ಕೆ. ಅವರನ್ನು ಗೌರವಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆ(ಪ.ಪೂ) ಇದರ ಉಪ ನಿರ್ದೇಶಕ ಜಯಣ್ಣ ಸಿ.ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಉದ್ಯಮಿ ಕೆ.ಶ್ರೀಪತಿ ಭಟ್, ಸ್ಕೌಟ್ಸ್ ಗೈಡ್ಸ್ ನ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ, ಜೊತೆ ಕಾರ್ಯದರ್ಶಿ ಬಿ.ವಿ.ರಾಮಲತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಾಜ್ಯ ರೆಂಜರಿಂಗ್ ಮೇಲ್ವಿಚಾರಕಿ ಮಲ್ಲೇಶ್ವರಿ ಜುಜಾರೆ, ಉಡುಪಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಗೈಡ್ ಆಯುಕ್ತೆ, ಜ್ಯೋತಿ ಪೈ, ಸ್ಕೌಟ್ ತರಬೇತಿ ಆಯುಕ್ತೆ ಪ್ರತೀಮ್ ಕುಮಾರ್, ಜಿಲ್ಲಾ ಗೈಡ್ಸ್ ಆಯುಕ್ತೆ ಜಯಶ್ರೀ, ಜಿಲ್ಲಾ ಸ್ಕೌಟ್ ಸಂಘಟನಾ ಆಯುಕ್ತ ಶಾಂತರಾಮ ಪ್ರಭು, ಜಿಲ್ಲಾ ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಸ್ಟೆಮ್ ಮತ್ತು ಔಷಧೀಯ ಸಸ್ಯಗಳ ಮಾಹಿತಿ ಶಿಬಿರದ ನಾಯಕರುಗಳಾದ ವೆಂಕಟ್ ರಾವ್, ಮಧುಶ್ರೀ ಉಪಸ್ಥಿತರಿದ್ದರು.*
ಸ್ಕೌಟ್ಸ್ ಗೈಡ್ಸ್ ನ ಜಿಲ್ಲಾ ಸಹಾಯಕ ಕಾರ್ಯದರ್ಶಿ ವಸಂತ್ ದೇವಾಡಿಗ ಅವರು ಸ್ವಾಗತಿಸಿದರು. ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಪ್ರಮಾಣ ಪತ್ರವನ್ನು ವಾಚಿಸಿದರು.
ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.
0 Comments