ಕಲ್ಲಬೆಟ್ಟು ವೈಬ್ರಂಟ್ ಕಾಲೇಜಿನಲ್ಲಿ ಮೊದಲ ವರ್ಷದ ವಾರ್ಷಿಕೋತ್ಸವ
ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾಲೇಜಿನ ಪ್ರಥಮ ವಾರ್ಷಿಕ ದಿನಾಚರಣೆ ‘ವೈಬ್ರಂಟ್ ಡೇ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಘಾಟಿಸಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ವಿಯಾಗಬೇಕಾದರೆ ಆಧುನಿಕ ಶಿಕ್ಷಣ ವ್ಯವಸ್ಥೆಗೆ ತಾವು ಹೊಂದಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು. ಪಿಯುಸಿಯಲ್ಲಿ ವಿಜ್ಞಾನವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಪಿಯು ಬೋರ್ಡ್ ಶಿಕ್ಷಣದೊಂದಿಗೆ ವೃತ್ತಿಪರ ಕೋಸ್ ೯ಗೆ ಪೂರಕವಾದ ತರಬೇತಿಯನ್ನು ಕೂಡ ಪಡೆಯುವ ಮೂಲಕ ನಿಮ್ಮ ಜೀವನದಲ್ಲಿ ಯಶಸ್ಸು ಸಾಧಿಸಬೇಕಾಗಿದೆ ಎಂದರು.
ಕಾಲೇಜಿನ ಸಹ ಸಂಸ್ಥಾಪಕರಾದ ಚಂದ್ರಶೇಖರ್ ರಾಜೇ ಅರಸ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಮೂಡುಬಿದಿರೆಯ ರಾಜಲಕ್ಷ್ಮಿ ಎಜುಕೇಷನ್ ಟ್ರಸ್ಟ್ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ನ ಅಧ್ಯಕ್ಷ ರಾಜೇಶ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಎರಡು ವರ್ಷದ ನಿಮ್ಮ ಪಿಯು ಶಿಕ್ಷಣ ನಿಮ್ಮ ಮುಂದಿನ 50-60ವರ್ಷದ ಭವಿಷ್ಯವನ್ನು ನಿರ್ಧರಿಸುತ್ತದೆ. ನಿಮ್ಮ ಜೀವನದಲ್ಲಿ ಬಹುಮುಖ್ಯವಾದ ತಿರುವನ್ನು ನೀಡುವ ಸಮಯ ಈ ಪಿಯು ಶಿಕ್ಷಣ ಅದ್ದರಿಂದ ಪ್ರತಿಯೊಬ್ಬರು ತಾವು ಭವಿಷ್ಯದಲ್ಲಿ ಏನಾಗಬೇಕು ಎಂಬುದನ್ನು ಇಂದೇ ತೀರ್ಮಾನಿಸಿ ಮುನ್ನುಗ್ಗುವುದನ್ನು ಕಲಿಯಬೇಕು ಎಂದು ಹೇಳಿದರು.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಇಂಟರ್ ಡಿಸಿಪ್ಲಿನರಿ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ವಿಜ್ಞಾನ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕರಾದ ಪ್ರೊ. ನವಕಾಂತ್ ಭಟ್ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಹಾಗೂ ಸಹ ಸಂಸ್ಥಾಪಕರಾದ ಡಾ. ಎಸ್.ಎನ್. ವೆಂಕಟೇಶ್ ನಾಯಕ್ ವಾರ್ಷಿಕ ವರದಿಯನ್ನು ವಾಚಿಸಿದರು. ವೇದಿಕೆಯಲ್ಲಿ ಮತ್ತೋರ್ವ ಅತಿಥಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪಿ.ಆನಂದ್ , ಕಾಲೇಜಿನ ಸಹ ಸಂಸ್ಥಾಪಕರಾದ ಯೋಗೇಶ್ ಬೆಡೇಕರ್, ಸುಭಾಷ್ ಜಾ, ಮೆಹಬೂಬ ಬಾಷಾ, ಶರತ್ ಗೋರೆ ಉಪಸ್ಥಿತರಿದ್ದರು.
ಉಪನ್ಯಾಸಕ ವಿನಾಯಕ್ ಶೆಣೈ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಡಾ. ರಶ್ಮಿ ಡಿ.ಅರಸ್ ವಂದಿಸಿದರು. ವರ್ಷ ಕಾಮತ್ ನಿರೂಪಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
0 Comments