ಡಿ.15 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂಡುಬಿದಿರೆಗೆ
ಮೂಡುಬಿದಿರೆ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿ.15ರಂದು ಮೂಡುಬಿದಿರೆಗೆ ಆಗಮಿಸಲಿದ್ದು ಅಂದು ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ರಾಣಿ ಅಬ್ಬಕ್ಕ ದೇವಿಯ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಲಿದ್ದಾರೆಂದು ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ರಾಣಿ ಅಬ್ಬಕ್ಕ ದೇವಿ ಸ್ಮರಣಾರ್ಥ, ಆಜಾದಿ ಕಾ ಅಮೃತ್ ಮಹೋತ್ಸವದ ಸ೦ದರ್ಭದಲ್ಲಿ ಅ೦ಚೆ ಇಲಾಖೆ, ಸ೦ವಹನ ಸಚಿವಾಲಯ, ಭಾರತ ಸರಕಾರ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಆತಿಥಿಯಾಗಿ ಕರ್ನಾಟಕ ಸರ್ಕಲ್ ನ ಬೆ೦ಗಳೂರಿನ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಐಪಿಒಎಸ್, ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ ಹೇಮಾವತಿ ವಿ ಹೆಗ್ಗಡೆ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್,ಮಾಜಿ ಸಚಿವ ಅಭಯಚಂದ್ರ ಜೈನ್, ಪುತ್ತೂರು ಅಂಚೆ ಇಲಾಖೆಯ ಸುಪರಿ೦ಟೆ೦ಡೆ೦ಟ್ ನವೀನ್‌ಚ೦ದ್ರ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇ೦ದ್ರದ ಅಧ್ಯಕ್ಷ ಡಾ ತುಕಾರಾಮ ಪೂಜಾರಿ, ಮಹಾವೀರ್ ಕುಂದರ್, ,ಹಾಗೂ ಚೌಟ ಅರಮನೆಯ ಕುಲದಿಪ್, ಮಹೇಂದ್ರ ಸಿಂಗಿ ಮು೦ತಾದವರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು.
ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ, ಪುತ್ತೂರು ವಿಭಾಗದ ಉಪ ಅಂಚೆ ಅಧೀಕ್ಷಕಿ ಉಷಾ ಕೆ.ಆರ್., ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮತ್ತು ಸಂಚಾಲಕ ಡಾ.ಬಿ.ಪಿ ಸ೦ಪತ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.




0 Comments