ಹಿಜಾಬ್ ನಿಷೇಧ ರದ್ದು ಪಡಿಸಿದರೆ ಶಾಲಾ ಕಾಲೇಜುಗಳು ಕೇಸರಿಮಯವಾಗಲಿದೆ-ಶರಣ್ ಪಂಪುವೆಲ್ ಎಚ್ಚರಿಕೆ
ರಾಜ್ಯದಲ್ಲಿ ಮತ್ತೆ ಹಿಜಾಬ್ ಗದ್ದಲ ಆರಂಭವಾಗಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಿಜಾಬ್ ಹಾಕಿಕೊಂಡೇ ಶಾಲಾ ಕಾಲೇಜುಗಳಿಗೆ ಹೋಗಿ ಎಂದು ಹೇಳಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪುವೆಲ್ ಎಚ್ಚರಿಕೆ ನೀಡಿದ್ದು ಒಂದೊಮ್ಮೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ತೆರಳಿದರೆ ಶಾಲಾ ಕಾಲೇಜುಗಳು ಕೇಸರಿಮಯವಾಗಲಿದೆ ಎಂದು ಹೇಳಿದ್ದಾರೆ.
"ಮಾನ್ಯ ಮುಖ್ಯಮಂತ್ರಿಗಳೇ, ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತಾಂಧತೆಯ ವಿಷ ಬೀಜವನ್ನು ಬಿತ್ತಬೇಡಿ. ಹಿಜಾಬ್ ನಿಷೇಧವನ್ನು ರದ್ಧುಗೊಳಿಸಿದರೆ ಕರ್ನಾಟಕದ ಶಾಲಾ ಕಾಲೇಜುಗಳು ಕೇಸರಿಮಯವಾಗಲಿದೆ" ಎಂದು ಅವರು ಹೇಳಿದ್ದಾರೆ.
0 Comments