ಆಟೋ ಚಾಲಕ ಆತ್ಮಹತ್ಯೆ

ಜಾಹೀರಾತು/Advertisment
ಜಾಹೀರಾತು/Advertisment

 ಆಟೋ ಚಾಲಕ ಆತ್ಮಹತ್ಯೆ



ಮೂಡುಬಿದಿರೆ: ಆಟೋ ಚಾಲಕನೋರ್ವ ಮನೆಯ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಾಂತ್ಯ ಗ್ರಾಮದ ಕಾಯರ್ ಗುಂಡಿ ನಿವಾಸಿ ಸೋಮೇಶ (54ವ)ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

  ಕೊಡಂಗಲ್ಲು ಮಹಾಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿದ್ದ ಅವರು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು.

  ಅಪಘಾತ ಸಹಿತ ತುರ್ತು ಸಂದರ್ಭದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ  ಅಸಹಾಯಕರನ್ನು ತನ್ನ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದರಲ್ಲದೆ, ಶವ ಸಂಸ್ಕಾರ ಮಾಡುವಲ್ಲಿಯೂ ಪರೋಪಕಾರಿಯಾಗಿದ್ದರು.

 ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  ಕಳೆದ 5 ವರ್ಷಗಳ ಹಿಂದೆ ಸೊಮೇಶ್ ಅವರ ಸಹೋದರನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Post a Comment

0 Comments