ಕಲ್ಲಬೆಟ್ಟು ಶಾಲೆಯಲ್ಲಿ ವಾರ್ಷಿಕೋತ್ಸವ:

ಜಾಹೀರಾತು/Advertisment
ಜಾಹೀರಾತು/Advertisment

 ಕಲ್ಲಬೆಟ್ಟು ಶಾಲೆಯಲ್ಲಿ ವಾರ್ಷಿಕೋತ್ಸವ:


  ಹೆಚ್ಚುವರಿ ಕೊಠಡಿ ನೀಡುವ ಭರವಸೆ ನೀಡಿದ ಶಾಸಕ ಕೋಟ್ಯಾನ್ 




ಮೂಡುಬಿದಿರೆ: ದ.ಕ.ಜಿ.ಪಂ.ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲಬೆಟ್ಟು ಇದರ ವಾರ್ಷಿಕೋತ್ಸವ ಸಮಾರಂಭವು ಸಂಜೆ ವಿಜೃಂಭಣೆಯಿಂದ ನಡೆಯಿತು.


   ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ವಾರ್ಷಿಕೋತ್ಸವ ಕಾರ್ಯಕ್ರಮ ಒಂದು ವೇದಿಕೆಯಾಗಿದೆ. ಕಳೆದ ಸಾಲಿನಲ್ಲಿ 13 ಶಾಲೆಗಳಿಗೆ ಮತ್ತು 12 ಪ.ಪೂ.ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಲಾಗಿತ್ತು. ಅಂತೆಯೇ ಇಲ್ಲಿಗೂ ಅಗತ್ಯವಿರುವ ಎರಡು ಹೆಚ್ಚುವರಿ ಕೊಠಡಿಗಳ ರಚನೆಗೆ ಅನುದಾನ ನೀಡಲಾಗುವುದು ಎಂದು ಭರವಸೆಯನ್ನು ನೀಡಿದರು.


ಉದ್ಯಮಿ ಕೆ.ಶ್ರೀಪತಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರವನ್ನು ಶಿಕ್ಷಕರು ನೀಡುತ್ತಾ ಬರುತ್ತಿದ್ದಾರೆ. ಹೆತ್ತವರು ತಮ್ಮ ಮಕ್ಕಳನ್ನು ದೂರದ ಶಾಲೆಗಳಿಗೆ ಕಳುಹಿಸದೆ ಇಲ್ಲಿನ ಸರಕಾರಿ ಶಾಲೆಗಳಿಗೆ ಕಳುಹಿಸಿದರೆ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಜಾಸ್ತಿಯಾಗಲು ಸಹಕಾರಿಯಾಗುತ್ತದೆ ಎಂದರು.

   ಪುರಸಭಾ ಸದಸ್ಯರಾದ ಜೊಸ್ಸಿ ಮಿನೇಜಸ್, ಸುಜಾತ ಶಶಿಕಿರಣ್, ಸುರೇಶ್ ಕೋಟ್ಯಾನ್, ಗಂಟಾಲ್ ಕಟ್ಟೆ ಚರ್ಚಿನ ಧರ್ಮಗುರು ರೆ/ಪಾ/ ರೋನಾಲ್ಡ್ ಡಿ'ಸೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಸಿಆರ್ ಪಿ ಮಹೇಶ್ವರಿ, ಎಪಿಎಂಸಿ ಮಾಜಿ ಅದ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀಧರ ಆಚಾರ್ಯ, ಉಪಾಧ್ಯಕ್ಷೆ ಶ್ವೇತಾ, ಸದಸ್ಯರಾದ ಸುಂದರ, ಹರೀಶ, ಅಂಗನವಾಡಿ ಕಾರ್ಯಕರ್ತೆ ರೇಖಾ, ಸಹಾಯಕಿ ವಿಜಯ ಈ ಸಂದರ್ಭದಲ್ಲಿದ್ದರು.

  ಕಳೆದ ಸಾಲಿನಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಉತ್ತಮ ಸೇವೆಯನ್ನು ನೀಡಿರುವ ದಿನೇಶ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.  ಶಾಲಾ ಮುಖ್ಯ ಶಿಕ್ಷಕಿ ಮಾರ್ಗರೇಟ್ ಎ.ಎಂ.ಸ್ವಾಗತಿಸಿ, ವರದಿ ವಾಚಿಸಿದರು. ಸಹಶಿಕ್ಷಕಿ ಅನಿತಾ ಸಿಕ್ವೇರಾ, ವಿಮಲಾ ಸ್ಪರ್ಧಾ ವಿಜೇತರುಗಳ ವಿವರ ನೀಡಿದರು. ಪಮ್ಮಿಶ್ರೀ, ಆಶಾ ಸಹಕರಿಸಿದರು.

  ಶಿಕ್ಷಕಿ ನಿಶಾ ಕಾರ್ಯಕ್ರಮ ನಿರೂಪಿಸಿದರು. ವಿನ್ನಿಫ್ರೆಢ್ ಪಿಂಟೋ ವಂದಿಸಿದರು.

  ಸಭಾ ಕಾರ್ಯಕ್ರಮದ ನಂತರ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಪ್ರಸ್ತುತಗೊಂಡಿತು.

Post a Comment

0 Comments