ವಂದೇ ಭಾರತ್ ಎಕ್ಸ್‌ಪ್ರೆಸ್‌ ಪ್ರಥಮ ಪ್ರಯಾಣದಲ್ಲಿ ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಕಾರ್ಯಕರ್ತ

ಜಾಹೀರಾತು/Advertisment
ಜಾಹೀರಾತು/Advertisment

 ವಂದೇ ಭಾರತ್ ಎಕ್ಸ್‌ಪ್ರೆಸ್‌ ಪ್ರಥಮ ಪ್ರಯಾಣದಲ್ಲಿ ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಕಾರ್ಯಕರ್ತ



ನಿರೀಕ್ಷೆಯಂತೆ ಮಂಗಳೂರು-ಮಡಗಾಂವ್ ನಡುವಿನ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 


ಮೊದಲ ಪ್ರಯಾಣವು ಅನೇಕ ಕುತೂಹಲಕಾರಿ ಸಂಗತಿಗಳಿಗೆ ಕಾರಣವಾಗಿತ್ತು. ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕ ಸತ್ಯ ನಿಡ್ಡೋಡಿಯವರ ಪತ್ನಿ ಶ್ರೀಮತಿ ಧನ್ಯಶ್ರೀಯವರ ಜನ್ಮದಿನಾಚರಣೆಯನ್ನು ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ಪ್ರಯಾಣದ ಖುಷಿಯೊಂದಿಗೆ ಆಚರಿಸಿದರು.

Post a Comment

0 Comments