*ರೋಟರಿ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ
ರೋಟರಿ ವಿದ್ಯಾ ಸಂಸ್ಥೆಗಳು ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
ಅದಾನಿ ಗ್ರೂಪ್ಸ್ ಇದರ ಕಾರ್ಯ ನಿರ್ವಾಹಕ ಅಧಿಕಾರಿ ಕಿಶೋರ್ ಆಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ನಿರಂತರ ಕಲಿಕೆ ಮತ್ತು ಆಸಕ್ತಿಯನ್ನು ಪ್ರಶಂಸಿಸಿದರು ಹಾಗೂ ದಿವಂಗತ ಅಮರನಾಥ ಶೆಟ್ಟಿ ಅವರ ದೂರದರ್ಶಿತ್ವ ಮತ್ತು ರೋಟರಿ ವಿದ್ಯಾಸಂಸ್ಥೆಗಳ ಕಾರ್ಯವೈಖರಿಗೆ ಮೆಚ್ಚುಗೆಯನ್ನು ಸೂಚಿಸುತ್ತಾ ಮಾತನಾಡಿದರು ಶಾಲಾ ಅಭಿವೃದ್ಧಿಯಲ್ಲಿ ಸಹಕರಿಸುತ್ತಿರುವ ಎಂ ಸಿ ಎಸ್ ಬ್ಯಾಂಕಿನ ಪರವಾಗಿ ಅಧಿಕಾರಿಗಳಾದ ಶ್ರೀ ಚಂದ್ರಶೇಖರ್ ರಾವ್ ಇವರನ್ನು ಗೌರವಿಸಲಾಯಿತು
ಅಂತೆಯೇ ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ, ಸಂಸ್ಥೆಯಲ್ಲಿ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳಿಗೆ ನಿಶ್ಮಿತಾ ಇವರು ಕೂಡ ಮಾಡುವ ರೂ. 25000 ವಿದ್ಯಾನಿಧಿಯನ್ನು ವಿತರಿಸಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ನಾರಾಯಣ ಪಿಎಂ ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಉಪಾಧ್ಯಕ್ಷ ಜಯರಾಮ ಕೋಟ್ಯಾನ್, ಸಂಚಾಲಕ ಜೆ ಡಬ್ಲ್ಯೂ ಪಿಂಟೋ, ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ್ ಬಿ., ಕಾರ್ಯದರ್ಶಿ ನಾಗರಾಜ್, ಆಡಳಿತ ಮಂಡಳಿಯ ಸದಸ್ಯರು, ಮೂರು ಸಂಸ್ಥೆಗಳ ಮುಖ್ಯಸ್ಥೆ ತಿಲಕಾ ಅನಂತವೀರ ಜೈನ್, ರವಿಕುಮಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನಂತ ಕೃಷ್ಣರಾವ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಂಚಾಲಕರಾದ ಪ್ರವೀಣ್ ಚಂದ್ರ ಜೈನ್ ಇವರು ವಂದಿಸಿದರು ಉಪನ್ಯಾಸಕಿ ಲಕ್ಷ್ಮಿ ಮರಾಠೆ ಕಾರ್ಯಕ್ರಮ ನಿರೂಪಿಸಿದರು.
0 Comments