ವಾಲ್ಪಾಡಿ ಮಾಡದಂಗಡಿ ಶಾಲಾ ಬೆಳ್ಳಿಹಬ್ಬ, ನೂತನ ಕೊಠಡಿ ಮತ್ತು ಪ್ರವೇಶದ್ವಾರ ಉದ್ಘಾಟನೆ
ಮೂಡುಬಿದಿರೆ: ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡದಂಗಡಿ ಶಾಲೆಯ ಬೆಳ್ಳಿಹಬ್ಬ, ನೂತನ ಕೊಠಡಿ ಮತ್ತು ಪ್ರವೇಶದ್ವಾರ ಉದ್ಘಾಟನೆ ಹಾಗೂ 'ಬೆಳ್ಳಿ ಬೆಳಕು' ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭವು ಶನಿವಾರ ನಡೆಯಿತು.
ಬೆಳ್ಳಿಹಬ್ಬದ ಸವಿನೆನಪಿಗಾಗಿ ನಿರ್ಮಾಣಗೊಂಡಿರುವ ನೂತನ ಕೊಠಡಿಯನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಿ, ಸ್ಮರಣ ಸಂಚಿಕೆ ಬೆಳ್ಳಿ ಬೆಡಗನ್ನು ಅನಾವರಣಗೊಳಿಸಿದರು.
ದುರ್ಗಾಂಬಾ ಹಾರ್ಡ್ವೇರ್ ಮಾಲಕ ಸುದರ್ಶನ್ ಅವರು ಕೊಡುಗೆ ನೀಡಿರುವ ನೂತನ ಪ್ರವೇಶದ್ವಾರವನ್ನು ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಿರ್ತಾಡಿ ಶಿಮುಂಜೆಗುತ್ತು ಎಸ್.ಡಿ.ಸಂಪತ್ ಸಾಮ್ರಾಜ್ಯ, ಭುವನ ಜ್ಯೋತಿ ವಸತಿ ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ್ ಡಿಸೋಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ತುಳು ಸಾಹಿತಿ ಜಯಂತಿ ಎಸ್.ಬಂಗೇರ, ಪತ್ರಕರ್ತರ ಸಂಘದ ಅಧ್ಯಕ್ಷ ಯಶೋಧರ ಬಂಗೇರ, ರೋಟರಿ ಟೆಂಪಲ್ ಟೌನ್ ಮಾಜಿ ಅಧ್ಯಕ್ಷ ಬೆಳುವಾಯಿ ಸೀತಾರಾಮ ಆಚಾರ್ಯ, ಜವಾಹರಲಾಲ್ ನೆಹರು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ್, ಸಿ.ಆರ್.ಪಿ ಆಗಿದ್ದ ಆದರ್ಶ್, ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀಧರ ಬಂಗೇರ, ಸುಧಾಕರ ಸುವರ್ಣ, ಅಬೂಬಕ್ಕರ್ ಶಿರ್ತಾಡಿ, ಗೌರವ ಸಲಹೆಗಾರರಾದ ಡಾ.ಆಶೀರ್ವಾದ್, ಲಕ್ಷ್ಮಣ ಸುವರ್ಣ, ವೈ.ವಿ.ವಿಶ್ವನಾಥ ಹೆಗ್ಡೆ, ಸುದರ್ಶನ್ ದುರ್ಗಾಂಬ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ಕೆ. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರಾಗಿ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮಕ್ಕೆ ಮುನ್ನ ವಾಲ್ಪಾಡಿ ಕೊಯಕುಡೆ ಬಳಿಯಿಂದ ಶಾಲೆಯವರೆಗೆ ಮೆರವಣಿಗೆ ನಡೆಯಿತು.
ಮುಖ್ಯೋಪಾಧ್ಯಾಯಿನಿ ವಾಣಿಶ್ರೀ ಅವರು ಸ್ವಾಗತಿಸಿ ವರದಿ ವಾಚಿಸಿದರು. ಸಹಶಿಕ್ಷಕಿ ರಶ್ಮಿ ಎಮ್.ಎಸ್ ಅವರು ಸನ್ಮಾನಿತರನ್ನು ಪರಿಚಯಿಸಿ, ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆಗೈದರು. ಎಸ್.ಡಿ.ಎಮ್.ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಕಾರ್ಯಕ್ರಮ ನಿರೂಪಿಸಿ, ರಶ್ಮಿ ಎಮ್.ಎಸ್. ವಂದಿಸಿದರು..
ಸಭಾ ಕಾರ್ಯಕ್ರಮ ಬಳಿಕ ಅಂಗನವಾಡಿ, ಶಾಲಾ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಿನ್ನಿಗೋಳಿ ವಿಜಯಾ ಕಲಾವಿದರಿಂದ 'ತೊಟ್ಟಿಲ್ ' ತುಳು ನಾಟಕ ಪ್ರದರ್ಶನಗೊಂಡಿತು.
0 Comments