ಚಿನ್ನ ಕದ್ದ ಆರೋಪಿಬಂಧನ
ಮೂಡುಬಿದಿರೆ:ಇಲ್ಲಿನ ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ ಸರ ಮೊಬೈಲ್ ಸೇರಿದಂತೆ ರೂ 50 ಸಾವಿರ ಮೌಲ್ಯದ ಸ್ವತ್ತು ಕಳವು ಮಾಡಿದ್ದ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಘಟನೆ ನಡೆದ ಮನೆ ಹತ್ತಿರದ ಸಿಸಿ ಕೆಮರಾವನ್ನು ಪೊಲೀಸರು ಪರಿಶೀಲಿಸಿ ಆರೋಪಿಯ ಮಾಹಿತಿ ಸಂಗ್ರಹಿಸಿ ನಂತರ ದಸ್ತಗಿರಿ ಮಾಡಿದರು. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
0 Comments