ರಾಜ್ಯಪಾಲರನ್ನು ಭೇಟಿಯಾದ ಸಂಸದ ನಳಿನ್ ಶಾಸಕ ಹರೀಶ್ ಪೂಂಜಾ:ಮಸ್ತಕಾಭಿಶೇಕ ಕಾರ್ಯಕ್ರಮಕ್ಕೆ ಆಹ್ವಾನ
ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಹಾಗೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹಲೋಟ್ ಅವರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಪತ್ರಿಕೆ ನೀಡಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಪ್ರಸಾದ್ ಅಜ್ಜಿಲ, ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಕುಮಾರ್ ಇಂದ್ರ ಅವರು ಉಪಸ್ಥಿತರಿದ್ದರು.
0 Comments